Breaking News

ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್​ 23ರಿಂದ ಮಳೆ(

Spread the love

ಬೆಂಗಳೂರು, ಮಾರ್ಚ್​ 19: ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್​ 23ರಿಂದ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಂದು ವಾರದ ಹಿಂದಷ್ಟೇ ಬೆಂಗಳೂರಿನ ಕೆಲವೆಡೆ ಮಳೆಯಾಗಿತ್ತು, ಅದಾದ ಬಳಿಕ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಎಂಎಂ ಹಿಲ್ಸ್​, ಎಚ್​ಡಿಕೋಟೆ, ಬಂಡೀಪುರ, ಸರಗೂರು, ಹುಣಸೂರು, ಮದ್ದೂರಿನಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಎಚ್​ಎಎಲ್​ನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

About Laxminews 24x7

Check Also

ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಆಗಲಿ: ಸಿಎಂ

Spread the loveಬೆಂಗಳೂರು: ದಕ್ಷಿಣ ಭಾರತದಲ್ಲಿ  ಸುಪ್ರೀಂಕೋರ್ಟ್  ಪೀಠ ಸ್ಥಾಪನೆ ಆಗಬೇಕು ಅಂತ ಸಿಎಂ ಸಿದ್ದರಾಮಯ್ಯ  ಒತ್ತಾಯ ಮಾಡಿದ್ದಾರೆ. ಜಿಕೆವಿಕೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ