Breaking News

ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ:C.M.

Spread the love

ಬೆಂಗಳೂರು: ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಸಂಬಂಧ ಪ್ರತಿಪಕ್ಷಗಳ ಆಕ್ಷೇಪಕ್ಕೆ ಸಮಗ್ರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್ತಿನಲ್ಲಿ ಉತ್ತರಿಸಿದರು.

ವಂದನಾನಿರ್ಣಯದ ಮೇಲೆ ವಿರೋಧಪಕ್ಷದ ನಾಯಕರು ಸೇರಿದಂತೆ 16 ಜನ ಸದಸ್ಯರು ಸುಮಾರು 9ಗಂಟೆ 56 ನಿಮಿಷಗಳ ಕಾಲ ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದಾರೆ. ಸದಸ್ಯರ ಟೀಕೆಗಳು, ಸಲಹೆ ಸೂಚನೆಗಳನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳಿಗೆ ಸರಿದಾರಿ ತೋರಲು ಟೀಕೆಗಳು ಇರಬೇಕು.

ಇತ್ತೀಚೆಗೆ ಹೆಚ್ಚು ವಿದ್ಯಾವಂತರು, ವಿಚಾರವಂತರು ಕೆಳಮನೆ ಹಾಗೂ ಮೇಲ್ಮನೆಗೂ ಬರುತ್ತಿರುವುದರಿಂದ, ಚರ್ಚೆಗಳ ಮಟ್ಟ ಎತ್ತರಕ್ಕೆ ಹೋಗಬೇಕೇ ವಿನ: ಗುಣಮಟ್ಟ ಇಳಿಯಬಾರದು ಎಂದು ಆಶಿಸಿದರು.ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ: ಚುನಾವಣೆ ಪೂರ್ವದಲ್ಲಿ 2022 ರಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದೆವು. 2023ರಲ್ಲಿ ಜೂನ್ 11 ರಲ್ಲಿ ಶಕ್ತಿ ಯೋಜನೆಯನ್ನು ವಿಧಾನಸೌಧದಲ್ಲಿ,

ಜುಲೈ ತಿಂಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿಗಳನ್ನು ಜಾರಿ ಮಾಡಲಾಯಿತು. ಆಗಸ್ಟ್ 1 ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿಯನ್ನು ಜಾರಿ ಮಾಡಲಾಯಿತು. ಡಿಸೆಂಬರ್​ನಲ್ಲಿ ಶಿವಮೊಗ್ಗದಲ್ಲಿ ಯುವನಿಧಿಯನ್ನು ಪ್ರಾರಂಭಿಸಲಾಯಿತು. ಗ್ಯಾರಂಟಿ ಯೋಜನೆಗಳನ್ನು ಒಂದು ವರ್ಷದ ಒಳಗೆಯೇ ಜಾರಿ ಮಾಡಲಾಯಿತು. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಪ್ರತಿಪಾದಿಸಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ: ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಹಾಗೂ ರಾಜ್ಯದ ಬಿಜೆಪಿಯವರು ಸುಳ್ಳು ಎಂದು ಟೀಕಿಸಿದರು. ಗ್ಯಾರಂಟಿಗಳಿಂದ ರಾಜ್ಯದ ಖಜಾನೆ ಖಾಲಿಯಾಗಿ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ