Breaking News

ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಖತರ್ನಾಕ ಕಳ್ಳಿಯರ ಗ್ಯಾಂಗ್ ಅರೆಸ್ಟ್..!!!

Spread the love

ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಖತರ್ನಾಕ ಕಳ್ಳಿಯರ ಗ್ಯಾಂಗ್ ಅರೆಸ್ಟ್..!!!
12 ಲಕ್ಷ 70 ಸಾವಿರ ಮೌಲ್ಯದ 143 ಗ್ರಾಂ ಚಿನ್ನ ಜಪ್ತಿ….
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್’ನ ಹೆಡೆಮುರಿ ಕಟ್ಟುವಲ್ಲಿ ಬೆಳಗಾವಿ ಮಾರ್ಕೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಳಗಾವಿ ನಗರದ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಚಿನ್ನದ ಒಡವೆಗಳನ್ನು ಕದಿಯುತ್ತಿದ್ದ ನಗರದ ವಡ್ಡರವಾಡಿ ನಿವಾಸಿ ಅನೀತಾ ಚೌಗಲೆ (58) ನಿಶಾ ಲೊಂಡೆ (25) ಮತ್ತು ಗಿಡ್ಡಿ ಲೊಂಡೆ (35)ಯನ್ನು ಬೆಳಗಾವಿ ಮಾರ್ಕೆಟ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 12 ಲಕ್ಷ 70 ಸಾವಿರ ಮೌಲ್ಯದ 143 ಗ್ರಾಂ ಚಿನ್ನದ ಒಡವೆಗಳನ್ನು ಜಪ್ತಿ ಮಾಡಲಾಗಿದೆ. ಈ ಮೂವರು ಕಳ್ಳಿಯರು ಹುಬ್ಬಳ್ಳಿ ಮೂಲದ ಕಾಂಚನ್ ಗೌಡರ ಎಂಬುವರ ಚಿನ್ನದ ಸರ ಕಳ್ಳತನ ಮಾಡಿದ್ದರು. ಈ ಬಗ್ಗೆ ಕಾಂಚನ ಗೌಡರ ಮಾರ್ಕೆಟ್ ‌ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಹಿನ್ನೆಲೆ ಮಾರ್ಕೆಟ್ ಎಸಿಪಿ ಸಂತೋಷ ಸತ್ಯನಾಯಕ ನೇತೃತ್ವದಲ್ಲಿ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ