ಗಂಗಾವತಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಇಲ್ಲಿನ ವಾಣಿಜ್ಯ ಮಳಿಗೆಯೊಂದಕ್ಕೆ ಬೆಂಕಿ ತಗುಲಿ ಅಂಗಡಿಯಲ್ಲಿದ್ದ ಸುಮಾರು ಒಂದೂವರೆ ಕೋಟಿ ರೂಪಾಯಿ ಮೊತ್ತದ ವಸ್ತುಗಳು ನಾಶವಾದ ಘಟನೆ ಇಲ್ಲಿನ ಕೊಪ್ಪಳ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಕೊಪ್ಪಳ ರಸ್ತೆಯ ಸಿಬಿಎಸ್ ವೃತ್ತದ ಸಮೀಪದ ಹಳೇಯ ಪವನಬಾರ್ ಬಳಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ದಾದಾಪೀರ್ ಎಂಬುವರಿಗೆ ಸೇರಿದ ಈ ಅಂಗಡಿಯಲ್ಲಿ ಹೊಸ ಜನರೇಟರ್, ಕೃಷಿ ಮತ್ತು ರೈತರಿಗೆ ಉಪಯುಕ್ತವಾಗುವ ಯಂತ್ರೋಪಕರಣಗಳ ಮಾರಾಟ ಮಾಡಲಾಗುತಿತ್ತು.ಮಾರಾಟ ಮತ್ತು ರಿಪೇರಿ (ಸೇಲ್ಸ್ ಅಂಡ್ ಸರ್ವೀಸ್) ಉದ್ದೇಶಿತ ಈ ಅಂಗಡಿಯಲ್ಲಿ ಹೊಸ ಜನರೇಟರ್ಗಳನ್ನು ಮಾರಾಟಕ್ಕೆ ಇಡಲಾಗಿತ್ತು.
ಇಂದು ಬೆಳಗ್ಗೆ ಆರು ಗಂಟೆಯ ಬಳಿಕ ಈ ಘಟನೆ ನಡೆದಿದ್ದು, ಮಾಲಿಕರಿಗೆ ಅರ್ಧ ಗಂಟೆಯ ಬಳಿಕ ಗೊತ್ತಾಗಿದೆ.ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿಯಿಂದ ಹೊಗೆ ಮಳಿಗೆಯಿಂದ ಹೊರ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಕೂಡಲೇ ದಾದಾಪೀರ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸುವ ಹೊತ್ತಿಗೆ ಅಂಗಡಿಯಲ್ಲಿದ್ದ ಬಹುತೇಕ ವಸ್ತುಗಳು ಬೆಂಕಿಗೆ ನಾಶವಾಗಿದ್ದವು.
Laxmi News 24×7