ಬೆಂಗಳೂರು, (ಮಾರ್ಚ್ 19): ರಾಮನಗರ (Ramanagara) ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಹೆಸರು ಬದಲಾವಣೆ ಮಾಡಲು ಹೊರಟಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರದ ಪ್ರಸ್ತಾಪವನ್ನ ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದೆ.
ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕನಸಿಗೆ ಕೇಂದ್ರ ಸರ್ಕಾರ ತಣ್ಣೀರೆರಚಿಸಿದೆ. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರ ಕನಸಿನ ಗ್ರೇಟರ್ ಬೆಂಗಳೂರು ವಿಧೇಯಕ (greater bengaluru bill ) ವಿರುದ್ಧ ಬಿಜೆಪಿ ಶಾಸಕರ ನಿಯೋಗ ರಾಜಭವನದ ಕದ ತಟ್ಟಿ, ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಿದೆ.ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದ ವಿರುದ್ಧ ಇಂದು (ಮಾರ್ಚ್ 9) ರಾಜ್ಯ ಬಿಜೆಪಿ ನಿಯೋಗ, ರಾಜಪಾಲರಿಗೆ ದೂರು ನೀಡಿದ್ದು,
“ಗ್ರೇಟರ್ ಬೆಂಗಳೂರು ಮಸೂದೆಗೆ ಅಂಕಿತ ಹಾಕಬೇಡಿ” ಎಂದು ಮನವಿ ಮಾಡಿದೆ. ವಿಪಕ್ಷ ನಾಯಕರಾದ ಆರ್. ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ದೂರು ಸಲ್ಲಿಕೆ ಮಾಡಲಾಗಿದೆ. ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಕೀಳು ಬುದ್ಧಿಯ ಕಾಂಗ್ರೆಸ್ ಪಾಠ ಕಲಿಸ್ತೀವಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
LAXMINEWS