ಬೆಂಗಳೂರು : ಸಚಿವರ ಮೇಲೆ ಎರಡು ಸಲ ಹನಿಟ್ರ್ಯಾಪ್ ಆಗಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸಚಿವರ ಮೇಲೆ ಎರಡು ಸಲ ಹನಿಟ್ರ್ಯಾಪ್ ಆಗಿದೆ. ಅದನ್ನು ಕೆಲವರು ಬಂಡವಾಳ ಮಾಡಿಕೊಂಡಿದ್ದಾರೆ.
ಸಂಬಂಧಪಟ್ಟ ಸಚಿವರಿಗೆ ದೂರು ಕೊಡಲು ಹೇಳಿದ್ದೇನೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.ಇದರಲ್ಲಿ ನಮ್ಮವರು ಅಷ್ಟೇ ಅಲ್ಲ. ಬೇರೆ ಪಕ್ಷದ ನಾಯಕರು ಹನಿಟ್ರ್ಯಾಪ್ನಲ್ಲಿ ಸಿಲುಕಿದ್ದಾರೆ.
ಇದು ಇಲ್ಲಿಗೆ ನಿಲ್ಲಬೇಕು. ಈ ವಿಚಾರವಾಗಿ ಸಿಎಂ ಮತ್ತು ಗೃಹ ಸಚಿವರ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದರು.
Laxmi News 24×7