ಬೆಳಗಾವಿ : ಸಕ್ಕರೆ ಕಾರ್ಖಾನೆಯವರು ಕಳೆದ 6 ತಿಂಗಳ ವೇತನ ನೀಡಿಲ್ಲೆಂದು ಕಾರ್ಮಿಕನೊರ್ವ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡ ಮೇಲಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಶುಕ್ರವಾರ ನಡೆದಿದೆ.
ವಾಮದೇವ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರಾಯಬಾಗ ರೇಣುಕಾ ಶುಗರ್ಸ್ ಸಕ್ಕರೆ ಕಾರ್ಖಾನೆ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದೆ. ಆದರೆ ಕೆಲವು ದಿನಗಳ ಹಿಂದೆಯಷ್ಟೇ ನನ್ನನ್ನು ಸೇರಿ ಹಲವರನ್ನು ಬೇರೆಡೆ ವರ್ಗಾವಣೆ ಮಾಡಿದ್ದರು.
ನಾನು ವರ್ಗಾವಣೆ ಮಾಡದಂತೆ ಮನವಿ ಮಾಡಿಕೊಂಡಿದ್ದೆ. ಆದರೂ ಸಹ ವರ್ಗಾವಣೆ ಮಾಡಿದ್ದರು. ಪ್ರಶ್ನೆ ಮಾಡಿದ್ದಕ್ಕೆ ಕಾರ್ಖಾನೆಯಿಂದ ತೆಗೆದು ಹಾಕಿದ್ದಾರೆ. ಜತೆಗೆ ಆರು ತಿಂಗಳ ವೇತನವನ್ನು ಸಹ ನೀಡಿಲ್ಲ. ಈ ಕುರಿತು ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದೆ. ಆದರೆ ಯಾವುದೇ ಪ್ರಯೋಜವಾಗಿಲ್ಲ ಎಂದು ಆರೋಪಿಸಿದ್ದಾನೆ.
ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಎಚ್ಚೆತ್ತ ಪೊಲೀಸರು ಕಟ್ಟಡ ಮೇಲೇರಿ ವ್ಯಕ್ತಿಯನ್ನು ಕಟ್ಟಡದಿಂದ ಕೆಳಗಿಳಿಸಿ, ವಿಚಾರಣೆ ನಡೆಸಿದ್ದಾರೆ. ಕೇರಳ ಮೂಲದ ವ್ಯಕ್ತಿ ಎಂದು ಹೇಳಲಾಗುತ್ತಿದೆ.
Laxmi News 24×7