ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಮಾಚ್ 21, 2025 ರಿಂದ ಎಪ್ರೀಲ್ 4 ವರೆಗೆ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಪ್ರಯುಕ್ತ (ಹುಬ್ಬಳ್ಳಿ-ಧಾರವಾಡ ನಗರ ಹೊರತು ಪಡಿಸಿ) ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿರ್ಭಂಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶ ಹೊರಡಿಸಿದ್ದಾರೆ.
ಈ ಕುರಿತು ಆದೇಶಿಸಿರುವ ಅವರು, ಧಾರವಾಡ ಜಿಲ್ಲೆಯಾದ್ಯಂತ ಒಟ್ಟು 106 ಪರೀಕ್ಷಾ ಕೇಂದ್ರಗಳಲ್ಲಿ ಮಾಚ್ 21, 2025 ರಿಂದ ಎಪ್ರೀಲ್ 4, 2025 ವರೆಗೆ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರ ಪರೀಕ್ಷೆ ಸಮಯದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:15 ವರೆಗೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5:15 ವರೆಗಿನ ಅವಧಿಯಲ್ಲಿ ಪರೀಕ್ಷಾ ವೇಳಾಪಟ್ಟಿ ಅನುಸಾರವಾಗಿ ಪರೀಕ್ಷೆಗಳು ನಡೆಯುತ್ತವೆ. ಪ್ರತಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಅಂತರದವರೆಗೆ ಸಿಆರ್ಪಿಸಿ ಕಲಂ 144 ರ ಮೇರೆಗೆ ನಿಷೆಧಾಜ್ಞೆ ಜಾರಿ ಮಾಡಿ, 200 ಮೀಟರ್ ಅಂತರದ ಒಳಗೆ ಬರುವ ಎಲ್ಲ ಝೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನಗಳಂದು ಮುಚ್ಚಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
Laxmi News 24×7