Breaking News

ಎಸ್.ಎಸ್.ಎಲ್.ಸಿ ಪರೀಕ್ಷೆ -1 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಆವರಣ ನಿರ್ಭಂಧಿತ ಪ್ರದೇಶ;144ರ ಮೇರೆಗೆ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

Spread the love

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಮಾಚ್ 21, 2025 ರಿಂದ ಎಪ್ರೀಲ್ 4 ವರೆಗೆ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಪ್ರಯುಕ್ತ (ಹುಬ್ಬಳ್ಳಿ-ಧಾರವಾಡ ನಗರ ಹೊರತು ಪಡಿಸಿ) ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿರ್ಭಂಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶ ಹೊರಡಿಸಿದ್ದಾರೆ.
ಈ ಕುರಿತು ಆದೇಶಿಸಿರುವ ಅವರು, ಧಾರವಾಡ ಜಿಲ್ಲೆಯಾದ್ಯಂತ ಒಟ್ಟು 106 ಪರೀಕ್ಷಾ ಕೇಂದ್ರಗಳಲ್ಲಿ ಮಾಚ್ 21, 2025 ರಿಂದ ಎಪ್ರೀಲ್ 4, 2025 ವರೆಗೆ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರ ಪರೀಕ್ಷೆ ಸಮಯದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:15 ವರೆಗೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5:15 ವರೆಗಿನ ಅವಧಿಯಲ್ಲಿ ಪರೀಕ್ಷಾ ವೇಳಾಪಟ್ಟಿ ಅನುಸಾರವಾಗಿ ಪರೀಕ್ಷೆಗಳು ನಡೆಯುತ್ತವೆ. ಪ್ರತಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಅಂತರದವರೆಗೆ ಸಿಆರ್ಪಿಸಿ ಕಲಂ 144 ರ ಮೇರೆಗೆ ನಿಷೆಧಾಜ್ಞೆ ಜಾರಿ ಮಾಡಿ, 200 ಮೀಟರ್ ಅಂತರದ ಒಳಗೆ ಬರುವ ಎಲ್ಲ ಝೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನಗಳಂದು ಮುಚ್ಚಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ