Breaking News

ವಿಶ್ವ ಹಿಂದೂ ಪರಿಷತ್ ಭಜರಂಗದಳದ ನೇತೃತ್ವದಲ್ಲಿ ಪ್ರತಿಭಟನೆ!

Spread the love

ಬೆಳಗಾವಿ : ವಿಶ್ವ ಹಿಂದೂ ಪರಿಷತ್ ಭಜರಂಗದಳದ ನೇತೃತ್ವದಲ್ಲಿ ಪ್ರತಿಭಟನೆ!
ಬೆಳಗಾವಿ ನಗರದಲ್ಲಿ ಅನ್ಯ ಕೋಮಿನ ಯುವಕರಿಂದ ವಿವಿದೆಡೆ ನಡೆಯುತ್ತಿರುವ ಅನುಚಿತ ಚಟುವಟಿಕೆಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಕಮಿಷನರ್ ಕಚೇರಿ ಮುಂದೆ ಇಂದು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮನವಿ ಅರ್ಪಿಸಿದರು
ಬೆಳಗಾವಿ ನಗರ ಪೊಲೀಸ್ ಕಮಿಷನರ್ ಕಚೇರಿ ಮುಂಭಾಗದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು ಪಾಂಗುಳಗಲ್ಲಿ ಅಶ್ವತ್ಥಾಮ ದೇವಸ್ಥಾನಕ್ಕೆ ಅನ್ಯಕೋಮಿನ ಯುವಕನಿಂದ ಕಲ್ಲೆಸೆತ ಪ್ರಕರಣವನನ್ನು ಖಂಡಿಸಿ
ಆರೋಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಈ ಕುರಿತು ಮುಖಂಡರೊಬ್ಬರು ಮಾಧ್ಯಮದೊಂದಿಗೆ ಮಾತನಾಡಿದರು.
ದರ್ಬಾರ್ ಗಲ್ಲಿ ಸಾರ್ವಜನಿಕವಾಗಿ ಸ್ಕ್ರೀನ್ ಮೂಲಕ ಔರಂಗಜೇಬ್ ,ಟಿಪ್ಪು ಸುಲ್ತಾನ್ ಸಾಹಸ ಪ್ರದರ್ಶಿಸಿ ಉದ್ಧಟತನ ತೋರಿದ್ದಾರೆ. ಈ ಮೂಲಕ ಸಂಭಾಜೀ ಮಹಾರಾಜರಿಗೆ ಅಪಮಾನ ಮಾಡಿದ್ದಾರೆ. ಕೇದನೂರ ಪಂಚಾಯತ್ ವ್ಯಾಪ್ತಿಯ ಮಹಾದೇವ ಮಂದಿರದ ಬಳು‌ ನಮಾಜ್, ಮಾಂಸಾಹಾರ ಸೇವನೆ ನಿಲ್ಲಿಸಬೇಕು ಹೆಣ್ಣುಮಕ್ಕಳನ್ನ ಕರೆದುಕೊಂಡು ಮೋಜು‌ಮಸ್ತಿ ಮಾಡೋದನ್ನ ನಿಲ್ಲಿಸಬೇಕು
ಬೆಳಗಾವಿ ಜಿಲ್ಲೆಯಲ್ಲಿ ಗಾಂಜಾ ನಶೆಯಲ್ಲಿಯೂ ದುರ್ಘಟನೆಗಳು ನಡೆಯುತ್ತಿವೆ ಮುಸ್ಲಿಂ ಯುವಕರಿಂದ ನಡೆಯುತ್ತಿರುವಇಂತಹ ಚಟುವಟಿಕೆಗಳನ್ನು ನಿಲ್ಲಿಸಲು ಕಾನೂನು ಕ್ರಮ ಕೈಗೊಂಡು ಶಾಂತಿ ಕಾಪಾಡಬೇಕೆಂದು ಪೊಲೀಸ್ ಕಮಿಷನರ್ ಅವರಿಗೆ ಮನವಿ ಅರ್ಪಿಸುತ್ತಿದ್ದೇವೆ. ಕ್ರಮ ಕೈಗೊಳ್ಳದಿದ್ದರೆ ಮುಂದೆ ಉಗ್ರ ಹೋರಾಟ ಮಾಡುತ್ತೇವೆಂದು ಭಜರಂಗದಳದ ಕಾರ್ಯಕರ್ತ ಸುನಿಲ ಗೌರನ್ನವರ ಎಚ್ಚರಿಕೆ ನೀಡಿದರು
ಮನವಿ ಸ್ವೀಕರಿಸಿದ ಪೊಲೀಸ್ ಆಯುಕ್ತ ಎಡಾ ಮಾರ್ಟಿನ್ ಮಾರ್ಬನ್ಯಾಂಗ ಅವರು, ಈಗಾಗಲೇ ಕೆಲವರ ಮೇಲೆ ಪ್ರಕರಣ ದಾಖಲಿಸಿದ್ದು ಅಲ್ಲಲ್ಲಿ ನಮ್ಮ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ ಇಂಥ ಘಟನೆಗಳು ನಡೆಯದಂತೆ ನೋಡಿಕೊಳ್ಳಲಾಗುವುದು ಎಲ್ಲರಿಗೂ ನ್ಯಾಯವನ್ನು ಒದಗಿಸುವುದು ನಮ್ಮ ಕರ್ತವ್ಯವಾಗಿದೆ ಇನ್ನು ಮುಂದೆ ಶಾಂತಿಭಂಗ ಗೊಳಿಸುವ ಚಟುವಟಿಕೆಗಳು ನಿಮ್ಮ ಗಮನಕ್ಕೆ ಬಂದರೆ ತಕ್ಷಣ ನನಗೆ ತಿಳಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು
ಬೆಳಗಾವಿ ಕಮಿಷನರ್ ಯಡಾ ಮಾರ್ಟಿನ್ ಅವರಿಗೆ ಮನವಿ ಸಲ್ಲಿಸಲಾಯಿತು. ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ