Breaking News

ಸ್ಯಾಂಕಿ ಟ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮೂಲಕ ಗಂಗೆಗೆ ನಮನ

Spread the love

ಬೆಂಗಳೂರು : ತೇಲುವ ವೇದಿಕೆ ಮೇಲೆ ತಾಯಿ ಗಂಗಮ್ಮ ದೇವಿಗೆ ನಮನ, ತಲಕಾವೇರಿಯಿಂದ ತಂದ ಕಾವೇರಿ ನೀರನ್ನು ಹಾಕಿ ಕಾವೇರಿ ಆರತಿ, ವರ್ಣರಂಜಿತ ದೀಪಾಲಂಕಾರ, ಸಾಂಸ್ಕೃತಿಕ ಕಾರ್ಯಕ್ರಮ, ಮಂತ್ರ ಘೋಷಗಳ ಭಕ್ತಿ ಭಾವದ ಜತೆಗೆ ಜಲ ಹಾಗೂ ಜಲ ಮೂಲಗಳ ಸಂರಕ್ಷಣೆಗಾಗಿ ಪ್ರತಿಜ್ಞಾ ಸ್ವೀಕಾರ.. ಇದು ಬೆಂಗಳೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಯಾಂಕಿ ಕೆರೆಯಲ್ಲಿ ಶುಕ್ರವಾರ ನಡೆದ ಕಾವೇರಿ ಆರತಿ ಕಾರ್ಯಕ್ರಮದ ಚಿತ್ರಣ.

ಮಾ.22ರಂದು ವಿಶ್ವ ಜಲ ದಿನದ ಅಂಗವಾಗಿ 21ರಂದು ಡಿಸಿಎಂ ಡಿ. ಕೆ. ಶಿವಕುಮಾರ್​​​ ಅವರ ನೇತೃತ್ವದಲ್ಲಿ ಬೆಂಗಳೂರು ಜಲ ಮಂಡಳಿ, ಜಲಸಂಪನ್ಮೂಲ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆ ಸಹಯೋಗದಲ್ಲಿ ಕಾವೇರಿ ಆರತಿ ಹಾಗೂ ಬೃಹತ್ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವನ್ನು ನಡೆಸಲಾಯಿತು. ಜಲಸಂರಕ್ಷಣೆಯ ಪ್ರತಿಜ್ಞಾವಿಧಿಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಿ. ಕೆ. ಶಿವಕುಮಾರ್, “ವಿಶ್ವ ಜಲ ದಿನ ಅಂಗವಾಗಿ ಇಂದಿನಿಂದ ಬೃಹತ್ ಪ್ರತಿಜ್ಞಾ ವಿಧಿ ಸ್ವೀಕಾರ ಅಭಿಯಾನಕ್ಕೆ ನಿಮ್ಮನ್ನು ಆಹ್ವಾನಿಸಿದ್ದೇನೆ. ಇಂದು ಪವಿತ್ರವಾದ ಕಾವೇರಿ ಆರತಿ ಮೂಲಕ ಚಾಲನೆ ನೀಡಲಾಗುತ್ತಿದೆ. ನೀವೆಲ್ಲರೂ ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ. ನಿಮಗೆ ಸರ್ಕಾರದ ಪರವಾಗಿ ಹೃದಯಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಇಂದು ಬೆಳಗ್ಗೆ ತಲಕಾವೇರಿಗೆ ಹೋಗಿ ಕಾವೇರಿ ಪೂಜೆ ಮಾಡಿ, ಪವಿತ್ರ ಕಾವೇರಿ ಜಲವನ್ನು ತಂದು ಮಲ್ಲೇಶ್ವರದಲ್ಲಿರುವ ಸ್ಯಾಂಕಿ ಕೆರೆಗೆ ಅರ್ಪಿಸಿ ಪವಿತ್ರವಾದ ಕಾರ್ಯಕ್ರಮ ನಡೆಸಲಾಗಿದೆ” ಎಂದು ತಿಳಿಸಿದರು.

“ನಮ್ಮ ದಿನನಿತ್ಯದ ಜೀವನ ಆರಂಭವಾಗುವುದೇ ನೀರಿನಿಂದ. ನೀರಿಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ನೀರಿನಿಂದಲೇ ನಾಗರೀಕತೆ, ನೀರಿನಿಂದಲೇ ಧರ್ಮ, ನೀರಿಲ್ಲದೆ ಪರಮಾತ್ಮನಿಲ್ಲ. ಇಲ್ಲಿನ ಸುತ್ತ ಮುತ್ತಲಿನ ಪ್ರದೇಶದಲ್ಲಿ ಶಕ್ತಿ ದೇವತೆಗಳಾದ ಗಂಗಮ್ಮ, ಮಾರಮ್ಮ, ಕಾಡುಮಲ್ಲೇಶ್ವರ, ಲಕ್ಷ್ಮಿ ನರಸಿಂಹಸ್ವಾಮಿ, ದಕ್ಷಿಣಮುಖಿ ನಂದಿತೀರ್ಥ ದೇವಾಲಯಗಳಿವೆ. ಸ್ಥಳೀಯ ನಾಗರೀಕರು ಈ ಕಾರ್ಯಕ್ರಮಕ್ಕೆ ಅತ್ಯುತ್ತಮ ಸಹಕಾರ ನೀಡಿದ್ದಾರೆ. ಪ್ರಕೃತಿಯ ಜಲ ಮಾತೆಗೆ ನಮಿಸಿ ಪ್ರಾರ್ಥಿಸುವುದು ನಮ್ಮ ಕರ್ತವ್ಯ. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ನಾನು ಹೇಳುತ್ತಿರುತ್ತೇನೆ” ಎಂದರು.


Spread the love

About Laxminews 24x7

Check Also

ಆರ್​​ಎಸ್​​ಎಸ್ ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ : ಶೆಟ್ಟರ್

Spread the loveಹುಬ್ಬಳ್ಳಿ : ಆರ್​​ಎಸ್​​ಎಸ್ ಸಂಘಟನೆಯನ್ನು ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ. ಇದು ನಿಮ್ಮ ಅಂತ್ಯದ ಆರಂಭ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ