Breaking News

ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದಗೆ ಪರ ,ವಿರೋಧ ಪ್ರತಿಭಟನೆ

Spread the love

ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದಗೆ ಪರ ,ವಿರೋಧ ಪ್ರತಿಭಟನೆ
ಬೆಳಗಾವಿ ಗಡಿಯಲ್ಲಿ ಮರಾಠಿ ಪುಂಡರ ಹಾವಳಿ ವಿರೋಧಿಸಿ ಹಾಗೂ ರಾಜ್ಯದ ಹಿತಾಸಕ್ತಿ ಸಂಬಂಧಿತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಬಂದ ಕರೆಗೆ ನೀಡಿದರೆ ಇದನ್ನು ಬೆಂಬಲಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರೆ ಮತ್ತೊಂದೆಡೆ. ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರ ಸಂಘಟನೆ ಬಂದ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.
ಹೌದು ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದಗೆ ನೀರಸಪ್ರತಿಕ್ರಿಯೆ ವ್ಯಕವಾಗಿದ್ದು. ಹುಬ್ಬಳ್ಳಿಯಲ್ಲಿ ಬೆಳಿಗ್ಗೆ ಬಂದ ಬಿಸಿ ತಟ್ಟಿಲ್ಲ. ಕೆಲ ಕನ್ನಡ ಪರ ಸಂಘಟನೆಗಳು ಹುಬ್ಬಳ್ಳಿ ಚೆನ್ನಮ್ಮ ವೃತ್ತದಲ್ಲಿ ಬಸ್ ತಡೆದು ಎಂಇಎಸ್ ಪುಂಡರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಇನ್ನು ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರ ಸಂಘಟನೆ ಕನ್ನಡ ಪರ ಹೋರಾಟಗಾರರಾದ ವಾಟಾಳ್ ನಾಗರಾಜ್ ಅವರು ಹೋರಾಟಗಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಬಂದ ಕರೆ ನೀಡಿದ್ದಾರೆಂದು ಕರ್ನಾಟಕ ಬಂದ ವಿರೋದಿಸಿ ಅವರು ಕೊಡ ಚೆನ್ನಮ್ಮ ಸಾರ್ವಜನಿಕರಿಗೆ ಗುಲಾಬಿ ಹೂ ನೀಡುವ ಮೂಲಕ ಬಂದ ಮಾಡಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.
ಒಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದಗೆ ನೀರಸಪ್ರತಿಕ್ರಿಯೆ ವ್ಯಕ್ತವಾಗಿದ್ದು ಬಂದ ಬೆಂಬಲಿಸಿ ಕೆಲವು ಸಂಘಟನೆಗಳು ಬಂದಗೆ ಬೆಂಬಲ ಸೂಚಿಸಿದರೆ ಇತ್ತ ಸಾರ್ವಜನಿಕರು ಹಾಗು ಆಟೋರಿಕ್ಷಾ ಚಾಲಕರ ಬೆಂಬಲ ನೀಡದಿರುವುದು ಕಂಡು ಬಂದಿತು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ