Breaking News

ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ಪ್ರತಿಭಟನೆ… ವಾಟಾಳ್ ನಾಗರಾಜ್ ಹಾಗೂ ಸಾರಾ ಗೋವಿಂದ್ ಸೇರಿದಂತೆ ಹಲವರ ಬಂಧನ…

Spread the love

ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ಪ್ರತಿಭಟನೆ…
ವಾಟಾಳ್ ನಾಗರಾಜ್ ಹಾಗೂ ಸಾರಾ ಗೋವಿಂದ್ ಸೇರಿದಂತೆ ಹಲವರ ಬಂಧನ…
ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ಪ್ರತಿಭಟನೆ…
ವಾಟಾಳ್ ನಾಗರಾಜ್ ಹಾಗೂ ಸಾರಾ ಗೋವಿಂದ್ ಸೇರಿದಂತೆ ಹಲವರ ಬಂಧನ…
ಕರ್ನಾಟಕ ಬಂದ್ ಯಶಸ್ವಿಯಾಗಿದೆ…
ನಮ್ಮ ಬೇಡಿಕೆ ಸರ್ಕಾರದ ಮುಂದಿಟ್ಟಿದ್ದೇವೆ; ವಾಟಾಳ್ ನಾಗರಾಜ್
ಇಂದು ಕರ್ನಾಟಕ ಬಂದ್ ಕರೆ ಕೊಟ್ಟ ಹಿನ್ನೆಲೆ ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳು ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆಯನ್ನು ನಡೆಸಿದರು. ಈ ವೇಳೆ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಹಾಗೂ ಸಾರಾ ಗೋವಿಂದ ಹಾಗೂ ಇನ್ನಿತರ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಟೌನ್ ಹಾಲ್ ಬಳಿ ಬೃಹತ್ ಡ್ರಾ
ಮಾ ನಡೆಯಿತು. ಅಲ್ಲಿಗೆ ಪ್ರತಿಭಟನೆಗಾಗಿ ಆಗಮಿಸಿದ್ದ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಹಾಗೂ ಸಾ.ರಾ. ಗೋವಿಂದ ಹಾಗೂ ಇನ್ನಿತರ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ಇಡೀ ರಾಜ್ಯಾದ್ಯಂತ ಬಂದ್ ಯಶಸ್ವಿಯಾಗಿದೆ. ಇದಕ್ಕೆ ಹೋರಾಟ ಮಾಡಿದ ಸಂಘಟನೆಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಎಲ್ಲಾ ಜಿಲ್ಲೆಗಳಲ್ಲಿ ಬಂದ್ ಅವರದ್ದೇ ರೂಪದಲ್ಲಿ ನಡೆದಿದೆ. ಕೆಲವು ಕಡೆ ಬಸ್ ಓಡಾಡುತ್ತಿದ್ದಾವೆ, ಜನ ಇಲ್ಲ. ಬಸ್ ನಿಲ್ದಾಣದಲ್ಲಿ ಜನ ಇಲ್ಲ. ಕನ್ನಡಿಗರಿಗಾಗಿ ಕರೆದ ಬಂದ್ ಯಶಸ್ವಿ ಆಗಿದೆ. ಬಂದ್‌ನ ಬೇಡಿಕೆ ಎಲ್ಲವನ್ನೂ ಜನರ ಮುಂದೆ ಸರ್ಕಾರದ ಮುಂದೆ ಇಟ್ಟಿದ್ದೇವೆ ಎಂದರು.
ನಮ್ಮವರನ್ನ ಬಂಧನ ಮಾಡಿದ್ದಾರೆ. ಬೆಂಗಳೂರು ಕಮಿಷನರ್ ಚಾಲೆಂಜ್ ತೆಗೆದುಕೊಂಡಿದ್ದಾರೆ. ಇವರು ವೈಯಕ್ತಿಕವಾಗಿ ತೆಗೆದುಕೊಂಡಿದ್ದಾರೆ. ಭಾಸ್ಕರ್ ರಾವ್ ರೀತಿ ಇವರು ರಾಜಕೀಯಕ್ಕೆ ಬರುತ್ತಾರೋ ಏನೋ ಗೊತ್ತಿಲ್ಲ. ನನಗೂ ನೊಟೀಸ್ ಕೊಟ್ಟಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಹೋರಾಟ ಮಾಡಿ ಅಂದಿದ್ದಾರೆ. ಟೌನ್ ಹಾಲ್‌ನಲ್ಲಿ ಪರ್ಮಿಷನ್ ಇಲ್ಲ ಅಂದಿದ್ದಾರೆ. ಬಂದ್ ಹತ್ತಿಕ್ಕೋ ಕೆಲಸ ಮಾಡಬಾರದಿತ್ತು. ನಾವು ಮಾಡಿರೋ ಹೋರಾಟದಲ್ಲಿ ಒಂದು ಹನಿ ನೀರು ಸಿಗದ ರೀತಿ ಆಗಬೇಕಿತ್ತು. ಆದರೂ ಯಶಸ್ಸು ಸಿಕ್ಕಿದೆ ಎಂದು ಹೇಳಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ