Breaking News

ಸಿಎಂ ಸಿದ್ದರಾಮಯ್ಯಗೆ ಹನಿಟ್ರ್ಯಾಪ್ ದಾಖಲೆ ನೀಡಿದ ರಾಜಣ್ಣ ಪುತ್ರ

Spread the love

ಬೆಂಗಳೂರು, ಮಾರ್ಚ್​ 22: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಚಿವ ರಾಜಣ್ಣ ವಿರುದ್ಧದ ಹನಿಟ್ರ್ಯಾಪ್​ಗೆ (honeytrap) ಯತ್ನಿಸಿದ ಕೇಸ್​ಗೆ ಟ್ವಿಸ್ಟ್ ಸಿಕ್ಕಿದೆ. ಸಚಿವ ರಾಜಣ್ಣ ಪುತ್ರ ಪರಿಷತ್ ಸದಸ್ಯ ರಾಜೇಂದ್ರ ಸಿಎಂ ಸಿದ್ದರಾಮಯ್ಯರನ್ನ (Siddaramaiah) ಭೇಟಿಯಾಗಿ ದಾಖಲೆ ಸಮೇತ ಹನಿಟ್ರ್ಯಾಪ್ ಪ್ರಕರಣದ ಮಾಹಿತಿ ನೀಡಿದ್ದಾರೆ. ಹನಿಟ್ರ್ಯಾಪ್ ಯತ್ನ ಸಂಬಂಧ ಎಲ್ಲಾ ಸಾಕ್ಷ್ಯಗಳನ್ನು ಸಿಎಂಗೆ ನೀಡಿದ್ದೇನೆ. ಸೋಮವಾರ ಅಥವಾ ಮಂಗಳವಾರ ಡಿಜಿ&ಐಜಿಪಿಗೆ ದೂರು ಸಲ್ಲಿಸುವೆ ಎಂದು ಹೇಳಿದ್ದಾರೆ.

ನನಗೆ ಹನಿಟ್ರ್ಯಾಪ್ ನಡೆಸಲು ಯತ್ನಿಸಿದ್ದರು: ರಾಜೇಂದ್ರ ರಾಜಣ್ಣ

ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್ ಎಂಎಲ್‌ಸಿ ರಾಜೇಂದ್ರ ರಾಜಣ್ಣ, ನನಗೆ ಹನಿಟ್ರ್ಯಾಪ್ ನಡೆಸಲು ಕಳೆದ 3 ತಿಂಗಳಿಂದ ಯತ್ನ ನಡೆಸಿದ್ದರು. ಹನಿಟ್ರ್ಯಾಪ್ ನಡೆಸಲು ನಮ್ಮ ಮಧುಗಿರಿ ನಿವಾಸಕ್ಕೂ ಬಂದಿದ್ದರು. ಬೆಂಗಳೂರಿನ ಸರ್ಕಾರಿ ನಿವಾಸಕ್ಕೂ ಬಂದು ಹನಿಟ್ರ್ಯಾಪ್‌ಗೆ ಯತ್ನಿಸಿದ್ದರು. ಯಾವ ಕಾರಣಕ್ಕಾಗಿ ನನಗೆ ಹನಿಟ್ರ್ಯಾಪ್‌ಗೆ ಯತ್ನಿಸಿದ್ದರೆಂದು ಗೊತ್ತಿಲ್ಲ. ಯಾರೆಂದು ಹೇಗೆ ಹೇಳೋದು?, ತನಿಖೆಯಾಗಲಿ ಎಲ್ಲ‌ ಹೊರಬರುತ್ತೆ ಎಂದಿದ್ದಾರೆ.

ನಮ್ಮ ತಂದೆಯವರಷ್ಟೇ ಅಲ್ಲ ಯಾರಿಗೂ ಈ ರೀತಿಯಾಗಿ ಆಗಬಾರದು. ಎಲ್ಲರ ಮನೆಯಲ್ಲೂ ಹೆಣ್ಮಕ್ಕಳು ಇರ್ತಾರಲ್ವಾ?, ಈ ರೀತ್ರಿ ಆದರೆ ಹೇಗೆ? ಪ್ರಕರಣದ ಬಗ್ಗೆ ಹಿರಿಯ ಐಪಿಎಸ್‌ ಅಧಿಕಾರಿ ನೇತೃತ್ವದಲ್ಲಿ ತನಿಖೆ ಆಗಲಿ. ಡಿಜಿ&ಐಜಿಪಿಗೆ ದೂರು ಸಲ್ಲಿಸಿದ ನಂತರ ದೆಹಲಿಗೆ ಹೋಗುತ್ತೇವೆ ಎಂದರು.

ತನಿಖೆ ಹೇಗೆ ಮಾಡುತ್ತಾರೆ ನೋಡ್ಬೇಕಿದೆ ಅದು ಸಿಎಂಗೆ ಮತ್ತು ಪರಮೇಶ್ವರ್​ಗೆ ಬಿಟ್ಟ ವಿಚಾರ ಎಂದು ತುಮಕೂರಿನ ಕಾರ್ಯಕ್ರಮವೊಂದರಲ್ಲಿ ವೇದಿಕೆಯ ಮೇಲೆಯೇ ಹನಿಟ್ರ್ಯಾಪ್ ಬಗ್ಗೆ ಬೇಸರ ಹೊರಹಾಕಿದ್ದು, ಇದರ ಹಿಂದೆ ದೊಡ್ಡ ದೊಡ್ಡವರ ಕೈವಾಡ ಇದೆ. ಎಲ್ಲದಕ್ಕೂ ದಾಖಲೆ ಇದೆ ಎಂದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ