Breaking News

ರೌಡಿ ಶೀಟರ್‌ ಹಬೀದ್‌ಗೆ ಗುಂಡೇಟು

Spread the love

ಶಿವಮೊಗ್ಗ: ಬಂಧನ ಕಾರ್ಯಾಚರಣೆ ವೇಳೆ ಪೊಲೀಸ್​ ಸಿಬ್ಬಂದಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್​​ ಕಾಲಿಗೆ ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್‌ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.

ಮಂಗಳವಾರ ಶಿವಮೊಗ್ಗದ ರೌಡಿಶೀಟರ್​​​​ ಕಡೆಕಲ್​​ ಹಬೀದ್​​ ಹಾಗೂ ಆತನ ಸಹಚರರು​​ ಓರ್ವ ವ್ಯಕ್ತಿಯ ಕೊಲೆಗೆ ಸಂಚು ರೂಪಿಸಿ ಹೊಂಚು ಹಾಕಿದ್ದರು. ಈ ಕುರಿತು ಮಾಹಿತಿ ಪಡೆದ ಭದ್ರಾವತಿ ಪೇಪರ್‌ಟೌನ್​ ಪೊಲೀಸ್​ ಠಾಣೆಯ ಇನ್ಸ್‌ಪೆಕ್ಟರ್ ನಾಗಮ್ಮ ತಮ್ಮ ತಂಡದೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸ್​​ ಸಿಬ್ಬಂದಿ ಅರುಣ್​ ಮೇಲೆ ಆರೋಪಿಗಳು ಮಾರಕಾಸ್ತ್ರ ಬೀಸಿ ಗಾಯಗೊಳಿಸಿದ್ದಾರೆ. ಇನ್ಸ್‌ಪೆಕ್ಟರ್‌ ನಾಗಮ್ಮನವರ ಮೇಲೂ ದಾಳಿಗೆ ಮುಂದಾದಾಗ ಅವರು ಹಬೀದ್‌ನ​ ಬಲಗಾಲಿಗೆ ಗುಂಡು ಹಾರಿಸಿದ್ದಾರೆ.

ಗಾಯಗೊಂಡಿರುವ ಅರುಣ್​ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೆಯೇ ಆರೋಪಿಗೆ ಭದ್ರಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ.ಹಬೀದ್​ ಮೇಲೆ ಒಟ್ಟು 20 ಪ್ರಕರಣಗಳಿವೆ ಎಂದು ಎಸ್ಪಿ ಮಿಥುನ್​ ಕುಮಾರ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಆರ್​​ಎಸ್​​ಎಸ್ ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ : ಶೆಟ್ಟರ್

Spread the loveಹುಬ್ಬಳ್ಳಿ : ಆರ್​​ಎಸ್​​ಎಸ್ ಸಂಘಟನೆಯನ್ನು ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ. ಇದು ನಿಮ್ಮ ಅಂತ್ಯದ ಆರಂಭ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ