Breaking News

ಅಕ್ರಮ ಮರ ಕಡಿಯುವಿಕೆಗೆ ವಿಧಿಸುವ ದಂಡ ಮತ್ತು ಶಿಕ್ಷೆಯನ್ನು ಹತ್ತು ಪಟ್ಟು ಹೆಚ್ಚಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ

Spread the love

ಬೆಂಗಳೂರು: ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ತತ್ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ ಘನ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿರುವುದನ್ನು ಉಲ್ಲೇಖಿಸಿದ್ದಾರೆ.

ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿರುವುದನ್ನು ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿರುವ ಸಚಿವರು, ಅಕ್ರಮ ಮರಗಳ ಕಡಿತಲೆಗೆ ವಿಧಿಸುವ ದಂಡದ ಪ್ರಮಾಣ ಹೆಚ್ಚಳದ ಅಗತ್ಯತೆ ಬಗ್ಗೆ ತಿಳಿಸಿದ್ದಾರೆ.

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ, ಇರುವ ಒಂದೇ ಭೂಮಿಯನ್ನು ರಕ್ಷಿಸಿ, ಸುರಕ್ಷಿತವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಲು, ಪ್ರಕೃತಿ, ಪರಿಸರ ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದೂ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ