Breaking News

ಕುಮಾರಸ್ವಾಮಿ ಬೆನ್ನಲ್ಲೇ ಇನ್ನಿಬ್ಬರು ನಾಯಕರ ಭೇಟಿಗೆ ಮುಂದಾದ ಸತೀಶ್‌ ಜಾರಕಿಹೊಳಿ

Spread the love

ನವದೆಹಲಿ, ಮಾರ್ಚ್ 27: ಶತ್ರುವಿನ ಶತ್ರು ಮಿತ್ರ ಎಂಬುದು ಎದುರಾಳಿಗಳನ್ನು ಹಣಿಯಲು ಬಳಸುವ ರಾಜಕೀಯ ರಣತಂತ್ರ. ಈಗ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಅದೇ ತಂತ್ರ ಹೆಣೆದಿದ್ದಾರಾ ಎಂಬ ಅನುಮಾನ ಸೃಷ್ಟಿಯಾಗಿದೆ. ಯಾಕೆಂದರೆ, ಹನಿಟ್ರ್ಯಾಪ್‌ (Honeytrap) ಪ್ರಕರಣ ಸದ್ದು ಮಾಡುತ್ತಿರುವ ಹೊತ್ತಿನಲ್ಲೇ, ಹೈಕಮಾಂಡ್​ಗೆ ದೂರು ನೀಡುತ್ತೇನೆ ಎಂದು ದೆಹಲಿಗೆ ತೆರಳಿದ್ದ ಸತೀಶ್‌ ಜಾರಕಿಹೊಳಿ, ಎದುರಾಳಿ ಪಕ್ಷದ ನಾಯಕನ ಭೇಟಿ ಮಾಡಿದ್ದಾರೆ. ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ (HD Kumaraswamy), ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಇನ್ನಿಬ್ಬರು ನಾಯಕರ ಭೇಟಿಗೆ ಮುಂದಾಗಿದ್ದಾರೆ.

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕುಮಾರಸ್ವಾಮಿ ಈಗ ಕೇಂದ್ರ ಸಚಿವರು. ಮತ್ತೊಂದೆಡೆ, ರಾಜ್ಯ ಕಾಂಗ್ರೆಸ್‌ ಸರ್ಕಾರದ ಪ್ರಭಾವಿ ಸಚಿವ ಸತೀಶ್ ಜಾರಕಿಹೊಳಿ. ಇವರಿಬ್ಬರ ಭೇಟಿಯೇ ಈಗ ಹತ್ತು ಹಲವು ಪ್ರಶ್ನೆಗಳು ಹುಟ್ಟಿಕೊಳ್ಳಲು ಕಾರಣವಾಗಿದೆ. ದೆಹಲಿಯಲ್ಲಿ ಕುಮಾರಸ್ವಾಮಿ ಜತೆ ಡಿನ್ನರ್‌ ಮೀಟಿಂಗ್ ಮಾಡಿದ್ದಾರೆ, ದೇವೇಗೌಡರ ಜತೆಗೂ ಗುಪ್ತ ಸಭೆ ನಡೆಸಿದ್ದಾರೆ. ಈ ಭೇಟಿಯ ಅಜೆಂಡಾ ಏನು? ಈ ಭೇಟಿಯ ಬಳಿಕ ರಾಜಕೀಯದ ಯಾವ ದಾಳ ಉರುಳುತ್ತೆ ಎಂಬುದು ರಹಸ್ಯವಾಗಿಯೇ ಉಳಿದಿದೆ. ಬೆಂಗಳೂರಿಗೆ ಬಂದಮೇಲೆ ಎಲ್ಲವನ್ನೂ  ಹೇಳುತ್ತೇನೆ ಎಂದು ಸತೀಶ್‌ ಹೇಳಿದ್ದು, ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಡಿಕೆ ಶಿವಕುಮಾರ್ ಹೇಳಿದ್ದೇನು?

ಕುಮಾರಸ್ವಾಮಿ ಹಾಗೂ ಸತೀಶ್‌ ಜಾರಕಿಹೊಳಿ ಭೇಟಿ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಈ ಬಗ್ಗೆ ಗರಂ ಆಗೇ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಕಾಂಗ್ರೆಸ್‌ ವಕ್ತಾರ. ಅವರದ್ದು ಯಾವ ರೀತಿಯ ಭೇಟಿ ಎಂದು ಅವರನ್ನೇ ಕೇಳಿ ಎಂಬುದಾಗಿ ಉತ್ತರಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ