ಯತ್ನಾಳ್ ಪಕ್ಷದಿಂದ ಉಚ್ಛಾಟನೆಯಾಗಿರಬಹುದು…ಮನಸ್ಸಿನಿಂದಲ್ಲ
ಪೋಸ್ಟ್ ಹಾಕಿದ್ದ ವಿಜಯಪುರ ಎಸ್.ಟಿ. ಮೋರ್ಚಾ ಪದಾಧಿಕಾರಿ ಅಪಘಾತದಲ್ಲಿ ಸಾವು
ಬಿಜೆಪಿಯಿಂದ ಯತ್ನಾಳ್ರನ್ನು ಉಚ್ಚಾಟನೆ ಬಳಿಕ ಅವರನ್ನು ಬೆಂಬಲಿಸಿ ರಾಜೀನಾಮೆ ನೀಡಿದ್ದ ವಿಜಯಪುರದ ಬಿಜೆಪಿ ನಗರ ಎಸ್ಟಿ ಮೋರ್ಚಾ ಪದಾಧಿಕಾರಿ ಕಾರು ಅಪಘಾತದಲ್ಲಿ ಮೃತಪಟ್ಟಿರುವಂತಹ ಘಟನೆ ನಡೆದಿದೆ.
ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ ಗೇಟ್‌ಪಾಸ್ ನೀಡಿದೆ.
ಮುಂದಿನ 6 ವರ್ಷಗಳ ಕಾಲ ಬಿಜೆಪಿಯಿಂದ ಯತ್ನಾಳ್‌ರನ್ನ ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಉಚ್ಛಾಟನೆ ಮಾಡಿ ನಿನ್ನೆ ಆದೇಶ ಹೊರಡಿಸಿತ್ತು. ಆ ಮೂಲಕ ಫೈರ್‌ಬ್ರ್ಯಾಂಡ್‌ಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿತ್ತು.
ಅತ್ತ ಅವರನ್ನು ಉಚ್ಚಾಟನೆ ಮಾಡುತ್ತಿದ್ದಂತೆ ಇತ್ತ ಯತ್ನಾಳ್ರನ್ನು ಬೆಂಬಲಿಸಿ ನಿನ್ನೆ ರಾಜೀನಾಮೆ ನೀಡಿದ್ದ ಪದಾಧಿಕಾರಿ ಇಂದು ಅಪಘಾತದಲ್ಲಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.ಬಿಜೆಪಿ ನಗರ ಎಸ್ಟಿ ಮೋರ್ಚಾದ ಕಾರ್ಯದರ್ಶಿ ಸಂತೋಷ್ ತಟಗಾರ ಮೃತ ಪದಾಧಿಕಾರಿ. ಸಂತೋಪ್ ತಟಗಾರ ಪ್ರಯಾಣಿಸುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ.
ಯತ್ನಾಳ್ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರಬಹುದು. ಆದರೆ ಜನರ ಮನಸ್ಸಿನಿಂದ ಉಚ್ಛಾಟನೆ ಮಾಡುವುದಕ್ಕೆ ಆಗಲ್ಲ. ವೇಟ್ ಆ್ಯಂಡ್ ಸಿ. ಬಿಜೆಪಿಗೆ ಭಾವಪೂರ್ವ ಶ್ರದ್ಧಾಂಜಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಸಾವಿಗೂ ಮುನ್ನ ಸಂತೋಷ್ ತಟಗಾರ ಪೋಸ್ಟ್ ಹಂಚಿಕೊಂಡಿದ್ದರು.
Laxmi News 24×7