Breaking News

ವಿಡಿಯೋ ಕಾಲ್ ಮಾಡಿ ನಗ್ನ ಚಿತ್ರಗಳಿವೆ ಎಂದು ಬೆದರಿಕೆ, ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ

Spread the love

ವಿಡಿಯೋ ಕಾಲ್ ಮಾಡಿ ನಗ್ನ ಚಿತ್ರಗಳಿವೆ ಎಂದು ಬೆದರಿಕೆ, ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ
ವಿಡಿಯೋ ಕಾಲ್ ಮಾಡಿ ನಗ್ನ ಚಿತ್ರಗಳಿವೆ ಎಂದು ಬೆದರಿಕೆ ಹಾಕಿ ಕೇಳಿದಷ್ಟು ಹಣ ಕೊಡದಿದ್ದರೆ ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆ ವೃದ್ಧ ದಂಪತಿಗಳು ನೇಣಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಬೀಡಿ ಗ್ರಾಮದ ನಿವೃತ್ತ ರೈಲ್ವೆ ಉದ್ಯೋಗಿ ಡಿಯಾಗೋ ನಜರತ್ (83), ಮತ್ತು ಪಾವಿಯಾ ನಜರತ್ (79) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ. ಕಳೆದೊಂದು ತಿಂಗಳಿಂದ ವೃದ್ಧ ದಂಪತಿ ಬೆನ್ನು ಬಿದ್ದಿದ್ದ ಸೈಬರ್ ಖದೀಮರು ತಾವು ಪೊಲೀಸರೆಂದು ಹೇಳಿಕೊಂಡು ನಿಮ್ಮ ನಗ್ನ ಚಿತ್ರಗಳಿವೆ ಎಂದು ವಿಡಿಯೋ ಕಾಲ್ ಮಾಡಿದ್ದರು. ಈಗಾಗಲೇ ಖದೀಮರ ಅಕೌಂಟ್ಗೆ ಆರು ಲಕ್ಷ ಹಣ ವರ್ಗಾವಣೆ ಮಾಡಿದ್ದ ವೃದ್ಧ ದಂಪತಿ
ಹೀಗಿದ್ದರೂ ಮತ್ತಷ್ಟು ಹಣ ನೀಡುವಂತೆ ಪೀಡಿಸಲು ಶುರು ಮಾಡಿದ್ದಾರೆ. ಖದೀಮರ ಕಿರಿಕಿರಿಗೆ ಬೇಸತ್ತು ಪಾವಿಯಾ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಪತ್ನಿ ಆತ್ಮಹತ್ಯೆಗೆ ಶರಣಾಗ್ತಿದ್ದಂತೆ ಹತಾಶೆಯಿಂದ ಪತಿ ಡಿಯಾಗೋ ಡೆತ್ ನೋಟ್ ಬರೆದಿಟ್ಟು ಚಾಕುವಿನಿಂದ ಕತ್ತು, ಕೈ ಕೂಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ವಸಹಾಯ ಸಂಘದ ಮಹಿಳೆ ವೃದ್ಧ ದಂಪತಿ ಮೃತದೇಹ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಸ್ಥಳಕ್ಕೆ ನಂದಗಡ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೀಮ್ಸ್ನಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ