Breaking News

ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಗೆ ಸಮನ್ಸ್ ಜಾರಿ

Spread the love

ನವದೆಹಲಿ,:ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ಪಡೆ ವಾಹನದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಬಂಗಾಳ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾದ್ಯಾಯ ಹಾಗೂ ಪೊಲೀಸ್ ಮಹಾ ನಿರ್ದೇಶಕ ವೀರೇಂದ್ರ ಅವರು ಡಿ.14 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್‍ನಲ್ಲಿ ಸೂಚಿಸಲಾಗಿದೆ.

ವಿಚಾರಣೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಕಾನೂನು ಸುವ್ಯವಸ್ಥೆ, ರಾಜಕೀಯ ಗಲಭೆಗಳಿಗೆ ಕಡಿವಾಣ ಹಾಕುವುದು ಸೇರಿದಂತೆ ಇನ್ನಿತರ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡಬೇಕಾಗುತ್ತದೆ. ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯಪಾಲ ಜಗ ದೀಪ್ ಧಾಂಕರ್ ವರದಿ ನೀಡಿದ ಬೆನ್ನಲ್ಲೆ ಕೇಂದ್ರ ಗೃಹ ಸಚಿವಾಲಯ ಸಮನ್ಸ್ ಜಾರಿ ಮಾಡಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ