Breaking News

ಯುಗಾದಿಗೆ ಊರಿಗೆ ಹೋಗುತ್ತಿದ್ದ ಇಬ್ಬರು ಯುವಕರು ಸೇರಿ ನಾಲ್ವರು ಸಾವು

Spread the love

ಉಡುಪಿ/ದಾವಣಗೆರೆ: ಕಾರು ಮತ್ತು ದ್ವಿಚಕ್ರ ವಾಹನ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಸವಾರರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರು ಸಮೀಪದ ಬಿ.ಹೆಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಸವಾರರಿಬ್ಬರು ದೂರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ದ್ವಿಚಕ್ರ ವಾಹನ ಸವಾರರನ್ನು ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎಂದು ಗುರುತಿಸಲಾಗಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಹಾಗೂ ಬೈಕ್ ನಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಕೆಲ ಸಮಯ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ಹಾಗೂ ಹೈವೇ ಪಟ್ರೋಲ್ ಸಿಬ್ಬಂದಿ ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ, ಪೊಲೀಸ್ ನಿರೀಕ್ಷಕ ನಂಜಪ್ಪ, ಗ್ರಾಮಾಂತರ ಠಾಣೆ ಪಿಎಸ್‌ಐ ನೂತನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕುಂದಾಪುರ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಟ್ ಆ್ಯಂಡ್ ರನ್, ಇಬ್ಬರು ಬೈಕ್ ಸವಾರರ ಸಾವು: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೀರೂರು ಹಾಗೂ ಸಮ್ಮಸಗಿ ರಾಜ್ಯ ಹೆದ್ದಾರಿಯ ಗುಳ್ಳೇಹಳ್ಳಿಯ ಕೂಗಳತೆಯಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಅರ್ಜುನ್ ನಾಯ್ಕ (25), ಹರೀಶ್ ನಾಯ್ಕ (31) ಮೃತ ಯುವಕರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ