Breaking News

ತಪ್ಪು ಗ್ರಹಿಕೆಯಿಂದ ಯತ್ನಾಳ್ ಅವರ ಉಚ್ಚಾಟನೆ ಆಗಿದೆ: ಮಾಜಿ ಸಚಿವ ಕುಮಾರ ಬಂಗಾರಪ್ಪ

Spread the love

ಬೆಂಗಳೂರು : ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿರುವುದು ಅನೇಕರಿಗೆ ನೋವು ತರಿಸಿದೆ. ಹಾಗಂತ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವು ವಿರೋಧ ಮಾಡಲ್ಲ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ಹೇಳಿದ್ದಾರೆ.

ಬೆಂಗಳೂರಿನ ಯುಬಿ ಸಿಟಿಯಲ್ಲಿರುವ ಮಾಜಿ ಸಂಸದ ಜಿ. ಎಂ ಸಿದ್ದೇಶ್ವರ್ ನಿವಾಸದಲ್ಲಿ ಇಂದು ಯತ್ನಾಳ್ ಹಾಗೂ ಅವರ ಬೆಂಬಲಿಗರು ನಡೆಸಿದ ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷ ಆಂತರಿಕ ವಿಚಾರ ಸಭೆ ಮಾಡಿದ್ದೇವೆ. ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿರುವ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳಿಗೂ ಇದು ಬೇಸರ ಆಗಿದೆ ಎಂದು ಹೇಳಿದರು.ಶಾಸಕ ಬಿ. ಪಿ ಹರೀಶ್ ಅವರಿಗೆ ನೀಡಿರುವ ಶೋಕಾಸ್ ನೋಟಿಸ್ ಬಗ್ಗೆ ಚರ್ಚೆ ಮಾಡಿದ್ದೇವೆ. ಅವರಿಗೆ ಮಾರ್ಗದರ್ಶನ ಮಾಡಿದ್ದೇವೆ. ರಾತ್ರಿ ವೇಳೆ ಅವರು ನೋಟಿಸ್‌ಗೆ ಉತ್ತರ ನೀಡುತ್ತಾರೆ ಎಂದು ಹೇಳಿದರು. ರಾಜ್ಯದಲ್ಲಿ ಎಲ್ಲವೂ ಸರಿ ಇಲ್ಲವೆಂದು ಯತ್ನಾಳ್ ಅವರು ವರಿಷ್ಠರಿಗೆ ದೂರು ನೀಡಿದ್ರು. ಆಘಾತಕಾರಿ ಘಟನೆ ನಡೆದಿದೆ. ಆದರೂ, ನಾವ್ಯಾರೂ ಪಕ್ಷ ಬಿಡಲ್ಲ. ಈಗಾಗಲೇ ರಮೇಶ್ ಜಾರಕಿಹೊಳಿ ಅವರು ಹೇಳಿದ್ದಾರೆ. ಬಿಜೆಪಿ ಪಕ್ಷವನ್ನು ಕಟ್ಟುತ್ತೇವೆ. ಸಂಘಟನೆ ಮಾಡುತ್ತೇವೆ. ಮುಂದೆ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ