Breaking News

ಎಂಎಸ್ಐಲ್, ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ – ಕಾಮರ್ಸ್ ಪೋರ್ಟಲ್‌

Spread the love

ಬೆಂಗಳೂರು : ಸರ್ಕಾರಿ ಸ್ವಾಮ್ಯದ ಎಂಎಸ್ಐಲ್, ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ -ಕಾಮರ್ಸ್ ಪೋರ್ಟಲ್‌ ತೆರೆಯಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರದ ಜೆಮ್‌ ಪೋರ್ಟಲ್‌ ಮಾದರಿಯಲ್ಲಿ ರಾಜ್ಯ ಸರ್ಕಾರ ಸೇರಿದಂತೆ ಖಾಸಗಿ ಒಡೆತನದ ವಿವಿಧ ಉತ್ಪನ್ನಗಳ ಮಾರಾಟದ ಜತೆಗೆ ಖರೀದಿ ವ್ಯವಸ್ಥೆಗೂ ಇದು ವೇದಿಕೆಯಾಗಲಿದೆ.

ಈ ಸಂಬಂಧ ಬೃಹತ್‌ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ಅವರು ಇಂದು ಎಂಎಸ್‌ಐಎಲ್‌ನ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ವಿಸ್ತೃತವಾಗಿ ಚರ್ಚಿಸಿದರು. ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು, ಜಾರಿಗೆ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಇದರ ಕಾರ್ಯಾಚರಣೆಯನ್ನು ನಾಲ್ಕು ಹಂತಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದು ಕಾರ್ಯರೂಪಕ್ಕೆ ಬಂದರೆ ಸರ್ಕಾರಿ ಇಲಾಖೆಗಳು ಯಾವುದೇ ಟೆಂಡರ್ ಇಲ್ಲದೇ ತಮ್ಮ ಇಲಾಖೆಗೆ ಬೇಕಾಗುವ ಸಾಮಗ್ರಿಗಳನ್ನು ಇದರ ಮೂಲಕವೇ ಖರೀದಿಸಬಹುದು. ಹಾಗೆಯೇ, ಮಾರಾಟ ಕೂಡ ಮಾಡಬಹುದು. ಕೇಂದ್ರ ಸರ್ಕಾರದ ಮಟ್ಟದಲ್ಲಿ ಟೆಂಡರ್ ಇಲ್ಲದೇ ನೇರವಾಗಿ ಖರೀದಿಸಲು ಜೆಮ್ ಪೋರ್ಟಲ್ ಇದ್ದು, ಅದೇ ಮಾದರಿಯಲ್ಲಿ ಇದು ಕೂಡ ಕೆಲಸ ಮಾಡಲಿದೆ ಎಂದು ಸಚಿವ ಪಾಟೀಲ್ ವಿವರಿಸಿದರು.ಮೊದಲ ಹಂತದಲ್ಲಿ ಕೇವಲ ಎಂಎಸ್‌ಐಎಲ್‌ ಉತ್ಪನ್ನಗಳನ್ನು ಮಾರಾಟ ಮಾಡುವುದು. ಎರಡನೇ ಹಂತದಲ್ಲಿ ಮೈಸೂರು ಸ್ಯಾಂಡಲ್‌ ಸೋಪು, ಲಿಡ್ಕರ್‌ ಉತ್ಪನ್ನ, ಮೈಸೂರು ರೇಷ್ಮೆ ಬಟ್ಟೆ, ಕಾವೇರಿ ಎಂಪೋರಿಯಂ ಉತ್ಪನ್ನ, ನಂದಿನಿ ಉತ್ಪನ್ನ ಇತ್ಯಾದಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಉತ್ಪನ್ನಗಳನ್ನು ಮಾರಾಟ ಮಾಡಲಾಗುವುದು. ಇದರಲ್ಲಿ ಎಂಎಸ್‌ಎಂಇ ಉತ್ಪನ್ನಗಳು ಹಾಗೂ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸುವ ಉತ್ಪನ್ನಗಳಿಗೂ ವೇದಿಕೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ