Breaking News

ಭಾರೀ ಸಂಖ್ಯೆಯಲ್ಲಿ ಜೆಡಿಎಸ್, ಕಾಂಗ್ರೆಸ್​ನಿಂದ ಬಿಜೆಪಿಗೆ ವಲಸೆ

Spread the love

ಚಿಕ್ಕಬಳ್ಳಾಪುರ : ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಗ್ರಾಮ ಪಂಚಾಯಿತಿ ಅಖಾಡದಲ್ಲಿ ಚುನಾವಣೆಗೂ ಮೊದಲೇ ಪಕ್ಷಾಂತರ ಪರ್ವಕ್ಕೆ ಚಾಲನೆ ನೀಡಿದ್ದಾರೆ. ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನ ಹಲವಾರು ಮುಖಂಡರು ತಮ್ಮ  ಬೆಂಬಲಿಗರ ಜೊತೆ ಸಚಿವ ಡಾ.ಕೆ. ಸುಧಾಕರ್ ನಾಯಕತ್ವವನ್ನು ಬೆಂಬಲಿಸಿ ಬಿಜೆಪಿಯತ್ತ ವಲಸೆ ಹೊರಟಿದ್ದಾರೆ.

ಸಚಿವ ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಯ ಹಾರೋಬಂಡೆ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ಕೈಗೊಂಡ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿಗೆ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬೆರೆಸದೆ ಸಮಗ್ರ ಅಭಿವೃದ್ಧಿ ಕಲ್ಪನೆಯಲ್ಲಿ ಸಚಿವ ಸುಧಾಕರ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಕಮಲ ಅರಳಿಸಲು ಮುಂದಾಗಿದ್ದಾರೆ. ಅನೇಕ ವರ್ಷಗಳಿಂದ ಒಣಗಿ ನಿಂತಿರುವ ಕೆರೆಗಳಿಗೆ ನೀರು, ಇನ್ನೂ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿರುವ ಕಾರಣಕ್ಕೆ ಅವರನ್ನು ಬೆಂಬಲಿಸುತ್ತಿರುವುದಾಗಿ ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ.


Spread the love

About Laxminews 24x7

Check Also

ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ

Spread the loveಸವದತ್ತಿ; ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ ಧಾರವಾಡದ ಮುರುಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ