Breaking News

ರಾಜ್ಯದ ವಿವಿಧೆಡೆ ಮಳೆ ಆರಂಭ

Spread the love

ಈಗಾಗಲೇ ರಾಜ್ಯದ ವಿವಿಧೆಡೆ ಮಳೆ ಆರಂಭವಾಗಿದೆ. ಏಪ್ರಿಲ್ 2 ರಿಂದ ಮಳೆ ಮತ್ತಷ್ಟು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏಪ್ರಿಲ್ 2ರಿಂದ ಮಳೆ ಜೋರಾಗಲಿದ್ದು ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎನ್ನಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು ವಿಜಯನಗರ, ಶಿವಮೊಗ್ಗತುಮಕೂರು, ಮಂಡ್ಯ ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್‌ನಲ್ಲಿ ಸಾಧಾರಣ ಮಳೆಯಾಗಲಿದೆ.

ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ