Breaking News

ಕಲ್ಯಾಣ ಕರ್ನಾಟಕದ ರೈತರಿಗೆ ಯುಗಾದಿ ಕೊಡುಗೆ

Spread the love

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಏಪ್ರಿಲ್ 1 ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ.

ಮಾರ್ಚ್ 30ರ ವರೆಗೆ ಭದ್ರಾ ಜಲಾಶಯದಲ್ಲಿ 28 ಟಿಎಂಸಿ ನೀರು ಸಂಗ್ರಹ ಲಭ್ಯವಿದೆ. ಇದರಲ್ಲಿ ಮೇ 8ರ ವರೆಗೆ ನೀರಾವರಿಗೆ 11 ಟಿಎಂಸಿ ಮತ್ತು ಕುಡಿಯುವ ನೀರಿಗಾಗಿ 14 ಟಿಎಂಸಿ ಅಗತ್ಯವಿದ್ದು, 3 ಟಿಎಂಸಿ ನೀರನ್ನು ಜಲಾಶಯದಲ್ಲಿ ಉಳಿಸಿಕೊಳ್ಳಬೇಕಾಗಿದೆ. ಏಪ್ರಿಲ್ 6 ರಿಂದ ಕಾಲುವೆಗಳನ್ನು ಕೇವಲ ಕುಡಿಯುವ ನೀರಿನ ಪೂರೈಕೆಗೆ ಮಾತ್ರ ಬಳಸಿಕೊಳ್ಳಲಾಗುವುದು. ರೈತಾಪಿ ಜನರ ಬೆಳೆಗಳಿಗೆ ಮತ್ತು ಜನರಿಗೆ ಕುಡಿಯುವ ನೀರು ಪೂರೈಸಲು ಸರ್ಕಾರ ಎಲ್ಲಾ ಹಂತದಲ್ಲೂ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಈ ಸಂಬಂಧ ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಜಲಸಂಪನ್ಮೂಲ ಇಲಾಖೆ ಮತ್ತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯರೊಂದಿಗೆ ಚರ್ಚಿಸಿದಂತೆ, 30-03-2025ರ ಮಾಹಿತಿಯ ಪ್ರಕಾರ, ಭದ್ರಾ ಜಲಾಶಯದಲ್ಲಿ ಪ್ರಸ್ತುತ 28 ಟಿಎಂಸಿ ನೀರು ಸಂಗ್ರಹವಾಗಿದೆ. ಮೇ 8ರ ವರೆಗೆ 11 ಟಿಎಂಸಿ ನೀರು ನೀರಾವರಿಗಾಗಿ ಅಗತ್ಯವಿದೆ. ಜಲಾಶಯದ ಇಂಜಿನಿಯರ್‌ಗಳ ಲೆಕ್ಕಾಚಾರದ ಪ್ರಕಾರ, ಮೇಲ್ದಂಡೆ ಮತ್ತು ಕೆಳದಂಡೆ ಸೇರಿದಂತೆ 14 ಟಿಎಂಸಿ ಕುಡಿಯುವ ನೀರಿನ ಅವಶ್ಯಕತೆ ಇದೆ. ಇದರಿಂದ ಉಳಿದ ಶುದ್ಧ ನೀರಿನ ಲಭ್ಯತೆ ಕೇವಲ 3 ಟಿಎಂಸಿ ಆಗಿರುತ್ತದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ