Breaking News

ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನ, ಇಬ್ಬರು ಆರೋಪಿಗಳು ಸೆರೆ

Spread the love

ಉಳ್ಳಾಲ(ದಕ್ಷಿಣ ಕನ್ನಡ): ದೇರಳಕಟ್ಟೆಯಲ್ಲಿರುವ ಮುತ್ತೂಟ್​ ಫೈನಾನ್ಸ್​ನಲ್ಲಿ ದರೋಡೆಗೆ ಯತ್ನಿಸಿದ ಮೂವರು ಆರೋಪಿಗಳ ಪೈಕಿ ಕೇರಳ ಮೂಲದ ಇಬ್ಬರನ್ನು ಕೊಣಾಜೆ ಪೊಲೀಸರು ಹಾಗೂ ಸ್ಥಳೀಯರು ಸೇರಿ ಹಿಡಿದಿದ್ದಾರೆ. ಕೇರಳ ನಿವಾಸಿಗಳಾದ ಮುರಳಿ ಮತ್ತು ಇರ್ಷಾದ್ ಬಂಧಿತರು.

ಶನಿವಾರ ಸಂಜೆ ರೈಲಿನಲ್ಲಿ ಬಂದಿದ್ದ ಈ ಮೂವರು ದೇರಳಕಟ್ಟೆ ಸಮೀಪ ರಾತ್ರಿವರೆಗೂ ಕಾದು ಕುಳಿತು ಕೃತ್ಯ ಎಸಗಲು ಮುಂದಾಗಿದ್ದರು. ತಡರಾತ್ರಿ 3 ಗಂಟೆ ವೇಳೆಗೆ ಡ್ರಿಲ್ ಮಷಿನ್ ಮೂಲಕ ಬಾಗಿಲು ಮುರಿಯಲು ಯತ್ನಿಸಿದ ಸಂದರ್ಭದಲ್ಲಿ ಸೈರನ್‌ ಮೊಳಗಿದೆ. ಎಚ್ಚೆತ್ತ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಮೀಪದಲ್ಲೇ ಗಸ್ತಿನಲ್ಲಿದ್ದ ಕೊಣಾಜೆ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಮೂವರು ಆರೋಪಿಗಳು ಪರಾರಿ ಆಗಲು ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಹಾಗೂ ಸ್ಥಳೀಯರು ಸೇರಿ ಇಬ್ಬರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಓರ್ವ ಆರೋಪಿ ತಪ್ಪಿಸಿಕೊಂಡಿದ್ದಾನೆ. ವಿಚಾರಣೆ ವೇಳೆ ಆರೋಪಿಗಳಿಬ್ಬರು ಕೇರಳದಲ್ಲಿ ವಿಜಯ ಬ್ಯಾಂಕ್​ನಲ್ಲಿ ದರೋಡೆ ನಡೆಸಿದವರೆಂದು ವರದಿಯಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ