Breaking News

ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ

Spread the love

ಬೆಂಗಳೂರು, ಮಾರ್ಚ್ 31: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ (Organ donation). ವೈದ್ಯಕೀಯ ಶಿಕ್ಷಣ ಇಲಾಖೆಯು ಈ ಅಂಗಾಂಗ ದಾನ ಯೋಜನೆಗೆ ಹೊಸ ರೂಪ ನೀಡಲು ಕ್ರಮ ಕೈಗೊಂಡಿದೆ.

ಮತ್ತೊಬ್ಬರ ಬಾಳಿಗೆ ಬೆಳಕಾಗುವ ಮಹತ್ವದ ಯೋಜನೆಗೆ ಇಲಾಖೆ ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ತನ್ನ ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ನವೀಕರಿಸಲು ಮತ್ತು ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿದೆ.

ಈ ಸಂಬಂಧ ಆದೇಶ ಕೂಡ ಹೊರಡಿಸಲಾಗಿದೆ. ಬೆಂಗಳೂರಿನ (Bengaluru) ವಿಕ್ಟೋರಿಯಾ ಆಸ್ಪತ್ರೆ (Victoria Hospital) 125ನೇ ವರ್ಷಾಚರಣೆ ಸಂದರ್ಭದಲ್ಲಿಯೇ ಈ ಮಹತ್ವದ ಕೇಂದ್ರ ಇಲ್ಲಿ ಆರಂಭವಾಗುತ್ತಿರುವುದು ಮತ್ತೊಂದು ಗಮನಾರ್ಹ ಸಂಗತಿಯಾಗಿದೆ.

ಮುಂದಿನ ನಾಲ್ಕರಿಂದ ಆರು ತಿಂಗಳಲ್ಲಿ ಈ ಅಂಗಾಂಗ ಮರು ಪಡೆಯುವಿಕೆ ಕೇಂದ್ರವು ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ಸೋಮವಾರ ಮಾಹಿತಿ ನೀಡಿದ್ದಾರೆ.

“ಕಸಿ ಮಾಡಲು ಅಂಗಾಂಗಗಳ ಖರೀದಿಯನ್ನು ಸುಗಮಗೊಳಿಸುವ ಮೂಲಕ ಅಂಗಾಂಗ ಮರುಪಡೆಯುವಿಕೆ ಕೇಂದ್ರವು ಆಸ್ಪತ್ರೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ” ಎಂದು ಸಚಿವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ