Breaking News

ಬೆಳಗಾವಿ ಕಿತ್ತೂರು ಚೆನ್ನಮ್ಮ ಮೃಗಾಲಯಕ್ಕೆ ಸಿಂಹಿಣಿ

Spread the love

ಬೆಳಗಾವಿ: ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಹೊಸದಾಗಿ ಸಿಂಹಿಣಿಯೊಂದು ಸೇರ್ಪಡೆಯಾಗಿದೆ. ಇನ್ಮುಂದೆ ಮೃಗಾಲಯಕ್ಕೆ ಬರುವ ಪ್ರವಾಸಿಗರು ಅದನ್ನು ಕಣ್ತುಂಬಿಕೊಳ್ಳಬಹುದು.

ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಿಂದ ಈ ಸಿಂಹಿಣಿಯನ್ನು ಭಾನುವಾರ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯಲ್ಲಿರುವ ಕಿರು ಮೃಗಾಲಯಕ್ಕೆ ಕರೆತರಲಾಗಿದೆ. 9 ವರ್ಷದ ಈ ಸಿಂಹಿಣಿ ಹೆಸರು ಭೃಂಗಾ.

ಫೆಬ್ರವರಿ 6ರಂದು ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ‘ನಿರುಪಮಾ’ ಎಂಬ ಸಿಂಹಿಣಿ ಅನಾರೋಗ್ಯದಿಂದ ಮೃತಪಟ್ಟಿತ್ತು. ಅದಾದ ಬಳಿಕ ಇಲ್ಲಿನ ಕೃಷ್ಣಾ ಎಂಬ ಗಂಡು ಸಿಂಹ ಮಂಕಾಗಿತ್ತು. ಈಗ ಭೃಂಗಾ ಮೃಗಾಲಯ ಪ್ರವೇಶಿಸುತ್ತಿದ್ದಂತೆ ಕೃಷ್ಣಾ ಮತ್ತೆ ಫುಲ್ ಆ್ಯಕ್ಟಿವ್​ ಆಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ