ಯಕ್ಸಂಬಾ ಪಟ್ಟಣದ ರಸ್ತೆಗಳ ಅಭಿವೃದ್ಧಿಗೆ 4.50 ಕೋಟಿ ರೂಪಾಯಿ ಅನುದಾನ:ಶಾಸಕ ಗಣೇಶ ಹುಕ್ಕೇರಿ
ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ 4.50 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು,ಆ ಕಾಮಗಾರಿಗಳಿಗೆ ಇವತ್ತು ಚಾಲನೆ ನೀಡಲಾಗಿದೆ ಶಾಸಕ ಗಣೇಶ ಹುಕ್ಕೇರಿ ಹೇಳಿದರು.
ಅವರು ಯಕ್ಸಂಬಾ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿ ಮಾತನಾಡಿದ ಅವರು ನಾನು ಹಾಗೂ ತಂದೆಯವರಾದ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರ ಪ್ರಯತ್ನದಿಂದ 1.20 ಕೋಟಿ ರೂಪಾಯಿ ವೆಚ್ಚದಲ್ಲಿ ಮಹಾದೇವ ಮಂದಿರದಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ವರೆಗೆ, 2.50 ಕೋಟಿ ವೆಚ್ಚದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಭವನದಿಂದ ಅಂಕಲಿ ರಸ್ತೆಯ ವರೆಗೆ, 85 ಲಕ್ಷ ವೆಚ್ಚದಲ್ಲಿ ಚೆನ್ನಮ್ಮ ವೃತ್ತದಿಂದ ಮಹಾದೇವ ಮಂದಿರ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದರು.
ಬಳಿಕ ಪಟ್ಟಣ ಪಂಚಾಯತ ಅಧ್ಯಕ್ಷ ಸುನೀಲ ಸಪ್ತಸಾಗರೆ ಮಾತನಾಡಿ ಶಾಸಕರಾದ ಗಣೇಶ ಹುಕ್ಕೇರಿ, ಎಂಎಲ್ಸಿ ಪ್ರಕಾಶ ಹುಕ್ಕೇರಿಯವರ ಪ್ರಯತ್ನದಿಂದ ಇವತ್ತು 4.50 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ಅವರಿಗೆ ನಾನು ಯಕ್ಸಂಬಾ ಪಟ್ಟಣದ ಜನರ ಪರವಾಗಿ ಅಭಿನಂದನೆ ತಿಳಿಸುತ್ತೇನೆ ಎಂದರು.
ಈ ಸಂಧರ್ಭದಲ್ಲಿ ಶಿವರಾಜ ಚಿತಳೆ,ಉಮೇಶ ಸಾತ್ವರ,ಕಿರಣ ಮಾಳಿ,ರವಿ ಖೋತ,ಅಂಕುಶ ಖೋತ,ವಿಠ್ಠಲ ನಾಯಿಕ,ಜಮೀರ ಮಕಾನದಾರ,ಮಹಾದೇವ ಮಾಳಗೆ,ಚಿದಾನಂದ ಬೆಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Laxmi News 24×7