ಧಾರವಾಡ ತಾಲೂಕಿನ ಹೊಲ್ತಿಕೋಟಿ ಗ್ರಾಮದಲ್ಲಿ ಮಹಿಳೆಯರು ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರ ಸಾರಿದ್ದಾರೆ. ನಾಲ್ಕೈದು ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ.
ಮದ್ಯ ಸೇವಿಸಿದ ಬಳಿಕ ಎಣ್ಣೆ ಪ್ರಿಯರು ಗ್ರಾಮದ ಬೀದಿಗಳಲ್ಲಿ, ನೀರಿನ ಟ್ಯಾಂಕ್ಗಳ ಬಳಿ, ಶಾಲಾ ಆವರಣದಲ್ಲಿ, ದೇವಸ್ಥಾನಗಳ ಎದುರು ಪ್ಯಾಕೆಟ್ಗಳನ್ನು ಎಸೆದು ಹೋಗುತ್ತಿದ್ದಾರೆ.
ನಿತ್ಯವೂ ರಾಶಿ ರಾಶಿ ಪ್ಯಾಕೆಟ್ ತೆಗೆದು ಗ್ರಾಮಸ್ಥರು ರೋಸಿ ಹೋಗಿದ್ದಾರೆ. ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದು ಮಹಿಳೆಯರು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಮಹಿಳೆಯರು ಸ್ವತಃ ಮದ್ಯ ಮಾರುವ ಅಂಗಡಿಗಳಿಗೆ ಮುತ್ತಿಗೆ ಹಾಕಿದ್ದಾರೆ. ಅಂಗಡಿಕಾರರಿಗೆ ಎಚ್ಚರಿಕೆ ನೀಡಿದ್ದಾರೆ. ಅಬಕಾರಿ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Laxmi News 24×7