ತುಮಕೂರು: ತುಮಕೂರು ಎಂಎಲ್ ಸಿ ರಾಜೇಂದ್ರ ಕೊಲೆಗೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಎ 1 ಆರೋಪಿ ರೌಡಿಶೀಟರ್ ಸೋಮ @ ಜೈಪುರ ಸೋಮ ಜೊತೆಗೆ ಎ-3 ಅರೋಪಿ ಅಮಿತ್ ಕೂಡ ಕ್ಯಾತಸಂದ್ರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ
ಕ್ಯಾತಸಂದ್ರ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಕರೆತಂದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕರಣದ ಹಿನ್ನೆಲೆ: ಸಚಿವ ಕೆ.ಎನ್.ರಾಜಣ್ಣ ಪುತ್ರ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋವೊಂದು ವೈರಲ್ ಆದ ಬೆನ್ನಲ್ಲೇ ಇತ್ತೀಚೆಗೆ ಮೂವರನ್ನು ತುಮಕೂರಿನ ಕ್ಯಾತಸಂದ್ರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದರು.
ಪುಷ್ಪಾ ಎಂಬ ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿತ್ತು. ರಾಜೇಂದ್ರ ಅವರ ಹತ್ಯೆಗೆ ರೌಡಿಶೀಟರ್ ಸೋಮ ಎಂಬಾತ ಸಂಚು ರೂಪಿಸಿದ್ದ ಕುರಿತು 18 ನಿಮಿಷಗಳ ಆಡಿಯೋವೊಂದು ವೈರಲ್ ಆಗಿದೆ. ರಾಜೇಂದ್ರ ಅವರ ಆಪ್ತ ರಾಕಿ ಮತ್ತು ಸೋಮನ ಆಪ್ತೆ ಪುಷ್ಪಾ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇತ್ತೀಚೆಗಷ್ಟೇ ಬಹಿರಂಗವಾಗಿತ್ತು. ಈ ಬೆನ್ನಲ್ಲೇ ಸೋಮ, ಪುಷ್ಪಾ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
Laxmi News 24×7