Breaking News

ಘನಘೋರ ಕೃತ್ಯಕ್ಕೆ ಸಾಕ್ಷಿಯಾದ ಕಲಬುರಗಿ: ಪತ್ನಿ, ಮಕ್ಕಳನ್ನು ಕೊಂದು, ಸರ್ಕಾರಿ ನೌಕರ ಆತ್ಮಹತ್ಯೆ

Spread the love

ಕಲಬುರಗಿ, ಏಪ್ರಿಲ್​​ 03: ಆತ ಸರ್ಕಾರಿ ನೌಕರ. ಮದುವೆಯಾಗಿ ಸುಖಃ ಸಂಸಾರ ನಡೆಸುತ್ತಿದ್ದ. ಅದಕ್ಕೆ ಸಾಕ್ಷಿವೆಂಬಂತೆ ಎರಡು ಮಕ್ಕಳು ಸಹ ಇದ್ದರು.

ಆದರೆ ಅದೇನಾಯ್ತೋ ಗೊತ್ತಿಲ್ಲ, ಡೆತ್​ನೋಟ್ (Death Note) ಬರೆದಿಟ್ಟು ತನ್ನ ಪತ್ನಿ ಸೇರಿದಂತೆ ಇಬ್ಬರು ಮಕ್ಕಳನ್ನು ಕೊಂದು (kill) ತಾನು ಕೂಡ ನೇಣಿಗೆ ಶರಣಾಗಿರುವಂತಹ ಘಟನೆ ನಗರದ ಗಾಬರೆ ಲೇಔಟ್​ನ ಅಪಾರ್ಟ್ಮೆಂಟ್​ನಲ್ಲಿ ಘಟನೆ ನಿನ್ನೆ ನಡೆದಿದೆ. ಈ ಘನಘೋರ ಕೃತ್ಯ ‌ಕಂಡು‌ ಇಡೀ ಕಲಬುರಗಿ ಬೆಚ್ಚಿಬಿದ್ದಿದೆ. ಸ್ಟೇಷನ್ ಬಜಾರ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಲಬುರಿಗಿ ಘನಘೋರ ಮತ್ತು ಕರಳು ಹಿಂಡುವ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಇಂತಹದೊಂದು ದೊಡ್ಡ ಅನಾಹುತಕ್ಕೆ ಕಾರಣವಾಗಿದ್ದು, ಸಂತೋಷ್ ಕೊರಳಿ ಎಂಬ ವ್ಯಕ್ತಿ.

ಕಲಬುರಗಿಯ ಟೆಸ್ಕಾಂನಲ್ಲಿ ಸೀನಿಯರ್ ಅಕೌಂಟೆಂಟ್​ ಆಗಿದ್ದ ಸಂತೋಷ್​ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಕೊಂದು ತಾನೂ ನೇಣಿಗೆ ಶರಣಾಗಿದ್ದಾನೆ.‌ ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಇಬ್ಬರು ಮಕ್ಕಳ್ಳನ್ನ ಕೊಲೆ‌ ಮಾಡಿರುವ ಸಂತೋಷ್ ಕೊನೆಗೆ‌ ತಾ‌ನೂ ಕೂಡ ಮನೆಯ ಫ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ