Breaking News

ಜಿಲ್ಲಾಧಿಕಾರಿ ಮೊಹ್ಮದ ರೋಷನ್ ಅವರನ್ನು ಸನ್ಮಾನಿಸಿ ಆಶೀರ್ವದಿಸಿದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

Spread the love

ಬೆಳಗಾವಿ : ಜಿಲ್ಲಾಧಿಕಾರಿ ಮೊಹ್ಮದ ರೋಷನ್ ಅವರನ್ನು ಸನ್ಮಾನಿಸಿ ಆಶೀರ್ವದಿಸಿದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ
ಬೆಳಗಾವಿ ಜಿಲ್ಲಾಧಿಕಾರ ಮೊಹಮ್ಮದ್ ರೋಷನ್ ಅವರಿಗೆ ಶುಕ್ರವಾರ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಗೌರವಿಸಿ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಬೆಳಗಾವಿ ಜಿಲ್ಲೆ ತುಂಬಾ ದೊಡ್ಡ ಜಿಲ್ಲೆ. ಇಲ್ಲಿ ಎಲ್ಲಾ ಸಂಪ್ರದಾಯದ ಮಠ, ಮಾನ್ಯಗಳು ಒಳ್ಳೆಯ ಕಾರ್ಯ ಮಾಡುತ್ತಿದೆ. ಅದರಲ್ಲಿಯೂ ಹುಕ್ಕೇರಿ ಹಿರೇಮಠ ಜಿಲ್ಲೆಯಲ್ಲಿ ಕನ್ನಡದ ಕಾರ್ಯದ ಜೊತೆಗೆ ಸಮಾಜ ಸುಧಾರಣೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಬೆಳಗಾವಿ ಜಿಲ್ಲಾ ಅಭಿವೃದ್ಧಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಜಿಲ್ಲೆಯ ಸಂಸದರು, ಶಾಸಕರು ಜನಪ್ರತಿನಿದಿಗಳು, ಜನರು ಸಹಕಾರ ನೀಡುತ್ತಿದ್ದಾರೆ. ಎಲ್ಲರ ವಿಶ್ವಾಸ ತೆಗೆದುಕೊಂಡು‌ ಕೆಲಸ ಮಾಡುತ್ತಿರುವುದು ಸಂತೋಷವಾಗುತ್ತದೆ ಎಂದರು.
ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಹೆಸ್ಕಾಂನಲ್ಲಿ‌ ಎಂ.ಡಿಯಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ.
ಬೆಳಗಾವಿಗೆ ಜಿಲ್ಲಾಧಿಕಾರಿಯಾಗಿ ಬಂದಿರುವ ಅವರು ಯುವಕರಿಗೆ ಆದರ್ಶವಾಗಿ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ನಮ್ಮ ಜಿಲ್ಲೆಗೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಿ ಎಂದು ಶುಭ ಹಾರೈಸಿದರು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ