Breaking News

ಎಲ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ರಕ್ತ ಸೌಲಭ್ಯ:ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಇಲಾಖೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

Spread the love

ಮುಂಬೈ:   ಎಲ್ಲ  ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಉಚಿತವಾಗಿ ರಕ್ತವನ್ನು ಒದಗಿಸುವ ಸೌಲಭ್ಯವನ್ನು ಜಾರಿಗೆ ತರಲು ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಇಲಾಖೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಮಹಾರಾಷ್ಟ್ರದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಪರಿಸ್ಥಿತಿ ಮುಂದುವರೆದಿರುವಂತೆ ಸರ್ಕಾರ ಈ ಅಧಿಸೂಚನೆ ಹೊರಡಿಸಿದೆ.  ಇಂದಿನಿಂದಲೇ ಈ ಸೇವೆ ಸಾರ್ವಜನಿಕರಿಗೆ ದೊರೆಯಲಿದೆ.

ಡಿಸೆಂಬರ್ 12 ರಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ರಕ್ತವಾಗಿ ದೊರೆಯುವಂತೆ ಮಾಡಲಾಗುತ್ತಿದೆ ಎಂದು ಗುರುವಾರ ಆರೋಗ್ಯ ಸಚಿವ ರಾಜೇಶ್ ಟೊಪ್ ಪ್ರಕಟಿಸಿದ್ದರು. ನಾಗರಿಕರು ರಕ್ತವನ್ನು ನೀಡುವಂತೆ ಪ್ರೋತ್ಸಾಹಿಸಿ ಗುರುವಾರ ಅವರು ಟ್ವೀಟ್ ಮಾಡಿದ್ದರು.

ರಾಜ್ಯದಲ್ಲಿ ರಕ್ತದ ಕೊರತೆಯಿಂದಾಗಿ ನಾನು ಮತ್ತು ಸುಪ್ರೀಯಾ ಸುಳೆ, ನಾಗರಿಕರು ರಕ್ತದಾನ ಮಾಡುವಂತೆ ಮನವಿ ಮಾಡಿರುವುದಾಗಿ ರಾಜೇಶ್ ಟೊಪ್ ಟ್ವೀಟರ್ ನಲ್ಲಿ ತಿಳಿಸಿದ್ದರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಾರ ಮಹಾರಾಷ್ಟ್ರದಲ್ಲಿ 74, 408 ಸಕ್ರಿಯ ಪ್ರಕರಣಗಳಿವೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ