Breaking News

ಕುಮಾರಸ್ವಾಮಿಗೆ ಹೆದರುವ ಮಗನಲ್ಲ ಎಂದ:ಡಿ ಕೆ ಶಿ

Spread the love

ಬೆಂಗಳೂರು: ನಾನು ಹೆಚ್​ ಡಿ ಕುಮಾರಸ್ವಾಮಿಗೆ ಹೆದರುವ ಮಗನಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸವಾಲು ಹಾಕಿದ್ದಲ್ಲದೆ, ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾ ಇನ್ನು ಸುಮ್ಮನಿರಲ್ಲ, ಸರ್ಕಾರದ ಮೇಲೆ ಸಮರಸಾರಿದ್ದೇನೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು. ‘ನೋಡಪ್ಪ, ಕುಮಾರಸ್ವಾಮಿಗೆ ನಾನು ಹೇಳುತ್ತೇನೆ. ಎಷ್ಟು ವ್ಯವಹಾರ ಇದೆ. ಅದನ್ನು ಬಿಡುಗಡೆ ಮಾಡಲಿ. ನನಗೂ ಗೊತ್ತಿದೆ. ನಾನು ಏನಾದ್ರೂ ತಪ್ಪು ಮಾಡಿದ್ರೆ ಯಾವ ಶಿಕ್ಷೆ ಬೇಕಾದ್ರೂ ಕೊಡಲಿ. ನನ್ನ ಆಸ್ತಿ, ಮಕ್ಕಳ ಮತ್ತು ಕುಟುಂಬದ ಆಸ್ತಿ ಎಷ್ಟಿದೆ?, ಅದನ್ನೆಲ್ಲಾ ತೆಗೆಸಿದ್ದಾರೆ. ಕುಮಾರಸ್ವಾಮಿಗೆಲ್ಲಾ ಹೆದರುವಂತಹ ಮಗ ಅಲ್ಲ ನಾನು ಎಂದು ತಿರುಗೇಟು ನೀಡಿದರು.

ಬೆಲೆ ಏರಿಕೆ ವಿರುದ್ಧ ಬಿಜೆಪಿ ಹೋರಾಟದ ಬಗ್ಗೆ ಪ್ರತಿಕ್ರಿಯಿಸುತ್ತಾ, ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ.‌ ನಾವೇನು ಈಗ ಬೆಲೆ ಏರಿಕೆ ಮಾಡಿಲ್ಲ. ಅವರು ಬೆಲೆ ಏರಿಕೆ ಮಾಡಿದ ಕಾರಣಕ್ಕೆ ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದು. ರೈತರಿಗೆ ಸಹಾಯವಾಗಲು ಹಾಲಿನ ಬೆಲೆ ಏರಿಕೆ ಮಾಡಲಾಗಿದೆ. ಬೆಲೆ ಏರಿಕೆ ನಂತರವೂ ಬೇರೆ ರಾಜ್ಯಗಳಿಗಿಂತ ನಮ್ಮಲ್ಲಿ ಹಾಲಿನ ದರ ಕಡಿಮೆಯಿದೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.ದೆಹಲಿ ಪ್ರವಾಸ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿ, ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ಅನುದಾನ ಬಿಡುಗಡೆ ವಿಚಾರವನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಇಡಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವರು ತಿಳಿಸಿದ್ದಾರೆ. ನಾವು ಭದ್ರಾ ಯೋಜನೆಗೆ ಎಷ್ಟು ಖರ್ಚು ಮಾಡಿದ್ದೇವೆ, ಕೇಂದ್ರ ಎಷ್ಟು ಕೊಡಬೇಕು ಎಂಬುದನ್ನೂ ತಿಳಿಸಿದ್ದೇವೆ. ದೆಹಲಿ ಭೇಟಿ ವೇಳೆ ಕೇಂದ್ರ ಜಲಶಕ್ತಿ ಸಚಿವರನ್ನು ನಾನು ಹಾಗೂ ಮುಖ್ಯಮಂತ್ರಿಯವರು ಭೇಟಿ ಮಾಡಿ ರಾಜ್ಯದ ನೀರಾವರಿ ಸಂಬಂಧಿತ ವಿಚಾರಗಳನ್ನು ಚರ್ಚೆ ಮಾಡಿದೆವು. ಮಹದಾಯಿ, ಮೇಕೆದಾಟು, ಕಳಸಾ ಬಂಡೂರಿ, ಭದ್ರಾ ಮೇಲ್ದಂಡೆ ವಿಚಾರಗಳನ್ನು ಮನವರಿಕೆ ಮಾಡಿದ್ದೇವೆ. ನಮ್ಮ ಸಮಸ್ಯೆಗಳು ಅವರಿಗೆ ಅರ್ಥವಾಗಿದೆ. ಈ ವಿಚಾರವಾಗಿ ಒಬ್ಬೊಬ್ಬರನ್ನೇ ಕರೆಸಿ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ