Breaking News

ಕಲ್ಬುರ್ಗಿಯಲ್ಲಿ ಭೀಕರ ಅಪಘಾತ ಐವರ ದುರ್ಮರಣ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ; ಜಿಲ್ಲಾ ಉಸ್ತುವಾರಿ ಸಚಿವ ತಿಮ್ಮಾಪೂರ

Spread the love

ಕಲ್ಬುರ್ಗಿಯಲ್ಲಿ ಭೀಕರ ಅಪಘಾತ ಐವರ ದುರ್ಮರಣ
ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ; ಜಿಲ್ಲಾ ಉಸ್ತುವಾರಿ ಸಚಿವ ತಿಮ್ಮಾಪೂರ
ಭೀಕರವಾದ ಅಪಘಾತ ಸಂಭವಿಸಿ, ಸ್ಥಳದಲ್ಲೇ ಐವರು ಮೃತಪಟ್ಟು, ಹನ್ನೊಂದು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸೊನ್ನ ಕ್ರಾಸ್ ಹತ್ತಿರ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಸಿಎಂ ಘೋಷಣೆ ಮಾಡಿದ್ದಾರೆ.
ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ ಕ್ರಾಸ್ ಹತ್ತಿರ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದು ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ಅವಘಡ ಸಂಭವಿಸಿದ್ದು, ಅಪಘಾತದಲ್ಲಿ ವಾಜೀದ್, ಮೆಹಬೂಬ್, ಪ್ರಿಯಾಂಕಾ, ಮೆಹಬೂಬ್ ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು,ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ
ದಾಖಲಾಗಿದೆ.ಬಾಗಲಕೋಟೆಯಿಂದ ಕಲಬುರಗಿ ನಗರದ ಖಾಜಾ ಬಂದೇ ನವಾಜ್ ದರ್ಗಾಕ್ಕೆ ಭೇಟಿ ನೀಡಲು ಬರುತ್ತಿದ್ದರು.
ಒಂದೇ ಕುಟುಂಬದ 31 ಜನರು ಮ್ಯಾಕ್ಸಿಕ್ಯಾಬ ಮಾಡಿಕೊಂಡು ಕಲಬುರಗಿಯ ಖಾಜಾ ಬಂದೇ ನವಾಜ್ ದರ್ಗಾಗೆ ಬರುತ್ತಿದರು ಎನ್ನಲಾಗಿದ್ದು, ಮೃತರ ಕುಟುಂಬಸ್ಥರಿಗೆ ಸಿಎಂ ತಲಾ 2 ಲಕ್ಷ ರೂಪಾಯಿ ಘೋಷಣೆ ಮಾಡಿದ್ದಾರೆ.
ಜೊತೆಗೆ ಕಳೆದವಾರ ಬೆಳಗಲಿ ಬಳಿ ಬಸ್ ಅಪಘಾತದಲ್ಲಿ ಇಬ್ಬರು ಸಾವನ್ಮಪ್ಪಿದ್ದು, ಆ ಮೃತ ದಂಪತಿಗಳಿಗೂ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ತಿಮ್ಮಾಪೂರ ತಿಳಿಸಿದ್ದಾರೆ.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ