ಚೆನ್ನೈ: ಸಿಬಿಐ ವಶದಲ್ಲಿದ್ದ 45 ಕೋಟಿ ರೂ ಮೌಲ್ಯದ 103 ಕೆಜಿ ಚಿನ್ನ ಕಾಣೆಯಾಗಿದೆ. ಈ ಕುರಿತು ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಅಪರಾಧ ಇಲಾಖೆಗೆ ಆದೇಶ ನೀಡಿದೆ.
2012ರಲ್ಲಿ ಸಿಬಿಐ ಚೆನ್ನೈನ ಸುರಾನಾ ಕಾರ್ಪೊರೇಶನ್ ಲಿಮಿಟೆಡ್ ಕಚೇರಿಯ ಮೇಲೆ ದಾಳಿ ನಡೆಸಿ 103 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿತ್ತು. ಆದರೀಗ ಈ ಚಿನ್ನ ನಾಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ.ಮಹದೇವನ್ ತನಿಖೆಗೆ ಆದೇಶ ನೀಡಿದ್ದಾರೆ.