Breaking News

ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸಿಸಿಟಿವಿಯಲ್ಲಿ ಕಾಮುಕನ ದುಷ್ಕೃತ್ಯ ಸೆರೆ

Spread the love

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರನ್ನು ಹಿಂಬಾಲಿಸಿದ ಕಾಮುಕನೊಬ್ಬ ಯುವತಿಯೋರ್ವಳ ಮೇಲೆರಗಿ ಆಕೆಯ ಖಾಸಗಿ ಅಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಏಪ್ರಿಲ್ 3ರಂದು ಮುಂಜಾನೆ ಸುಮಾರು 1.55ಕ್ಕೆ ಘಟನೆ ನಡೆದಿದೆ. ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಸ್ಥಳೀಯ ನಿವಾಸಿ ಲೋಕೇಶ್‌ ಗೌಡ ಎಂಬುವವರು ನೀಡಿದ ದೂರಿನನ್ವಯ ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಏನಿದು ಘಟನೆ?: ಏಪ್ರಿಲ್​​ 3ರಂದು ಮುಂಜಾನೆ ಸುಮಾರು 1.55ಕ್ಕೆ ಇಬ್ಬರು ಯುವತಿಯರು ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಸಾಗುತ್ತಿದ್ದರು. ಈ ವೇಳೆ, ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿ ಏಕಾಏಕಿ ಓರ್ವ ಯುವತಿಯನ್ನು ಹಿಡಿದುಕೊಂಡು ಗೋಡೆಗೆ ಒರಗಿಸಿ ಆಕೆಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಆ ಯುವತಿಯರು ಜೋರಾಗಿ ಕಿರುಚಿದ ಪರಿಣಾಮ ಆರೋಪಿ ಯುವತಿಯನ್ನು ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಈ ಕೃತ್ಯ ಪಕ್ಕದಲ್ಲಿದ್ದ ಕಟ್ಟಡವೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕಿರುಕುಳ ಅನುಭವಿಸಿದ ಯುವತಿಯರು ಘಟನೆ ಸಂಬಂಧ ಯಾವುದೇ ದೂರು ನೀಡಿಲ್ಲ. ಆದರೆ, ಸ್ಥಳೀಯ ನಿವಾಸಿಯೊಬ್ಬರು ಸುದ್ದಗುಂಟೆಪಾಳ್ಯ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

2028ಕ್ಕೆ ಕಾಂಗ್ರೆಸ್​ ಕ್ರಾಂತಿ ಎಬ್ಬಿಸುತ್ತೆ: ಸಚಿವ ಚಲುವರಾಯಸ್ವಾಮಿ

Spread the loveಮಂಡ್ಯ : ನವೆಂಬರ್ ಕ್ರಾಂತಿನೂ ಇಲ್ಲ, ಸಂಕ್ರಾಂತಿ ಕ್ರಾಂತಿನೂ ಇಲ್ಲ, ಯುಗಾದಿಗೂ ಇಲ್ಲ. 2028ಕ್ಕೆ ಮತ್ತೆ ನಾವೇ, ಕಾಂಗ್ರೆಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ