Breaking News

ನಾಳೆ ದ್ವಿತೀಯ ಪಿಯು ಫಲಿತಾಂಶ:

Spread the love

ಬೆಂಗಳೂರು, (ಏಪ್ರಿಲ್ 07): ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾತರಿಂದ ಕಾಯುತ್ತಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ( 2nd PUC  Students) ಗುಡ್​ನ್ಯೂಸ್ ಸಿಕ್ಕಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (Karnataka 2nd PUC Exam 2025 Result ) ನಾಳೆ ಅಂದರೆ ಏಪ್ರಿಲ್ 08ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಅಂದೆ ಮಧ್ಯಾಹ್ನ 1.30ಕ್ಕೆ ವೆಬ್​ಸೈಟ್​ನಲ್ಲಿ PUC ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಇದ್ದಲ್ಲೇ ಆನ್​​ಲೈನ್​​ನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ. ಇನ್ನು ವೀಕ್ಷಣೆ ಮಾಡುವುದು ಹೇಗೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ರಿಸಲ್ಟ್ ನೋಡುವುದು ಎಲ್ಲಿ?

ಪತ್ರಿಕಾಗೋಷ್ಠಿ ಸಚಿವ ಮಧುಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ಆ ನಂತರ ಅಂದರೆ 1:30ರ ನಂತರ ಆನ್​ಲೈನ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಜತೆಗೆ, ಅಂಕಪಟ್ಟಿ ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ಎರಡು ವೆಬ್​ಸೈಟ್​ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.


Spread the love

About Laxminews 24x7

Check Also

ಆರ್​​ಎಸ್​​ಎಸ್ ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ : ಶೆಟ್ಟರ್

Spread the loveಹುಬ್ಬಳ್ಳಿ : ಆರ್​​ಎಸ್​​ಎಸ್ ಸಂಘಟನೆಯನ್ನು ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ. ಇದು ನಿಮ್ಮ ಅಂತ್ಯದ ಆರಂಭ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ