ಬೆಂಗಳೂರು, ಏಪ್ರಿಲ್ 7: ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi), ಮಾಜಿ ವಯನಾಡ್ ಸಂಸದ ರಾಹುಲ್ ಗಾಂಧಿ (Rahul Gandhi) ಹಾಗೂ ಕೇರಳ ಸರ್ಕಾರದ (Kerala Government) ಲಾಬಿಗೆ ಮಣಿದು ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರಕ್ಕೆ (Bandipura Forest Night Travaling) ಅವಕಾಶ ನೀಡಬಾರದು ಎಂದು ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಲಹರ್ ಸಿಂಗ್, ಎಷ್ಟೇ ರಾಜಕೀಯ ಒತ್ತಡಗಳು ಬಂದರೂ ಕೂಡ ಕರ್ನಾಟಕ ಸರ್ಕಾರ, ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ಎತ್ತಿಹಿಡಿಯಬೇಕು. ಬಂಡೀಪುರವನ್ನು ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ.
“ಕರ್ನಾಟಕದ ಬಂಡೀಪುರ ಅಭಯಾರಣ್ಯವು ಜೀವವೈವಿಧ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ಕೇಂದ್ರವಾಗಿದೆ. ವನ್ಯಜೀವಿ ಸಂರಕ್ಷಣಾ ಪ್ರತಿಷ್ಠಾನದ ಅಧ್ಯಯನ ವರದಿ ಪ್ರಕಾರ, 2005 ಮತ್ತು 2007ರ ನಡುವೆ, ಈ ಪ್ರದೇಶದಲ್ಲಿ ವಾಹನ ಅಪಘಾತದಿಂದ 286 ವನ್ಯಜೀವಿಗಳು ಮೃತಪಟ್ಟಿವೆ. 2009ರಲ್ಲಿ ಕರ್ನಾಟಕ ಸರ್ಕಾರ ರಾತ್ರಿ 9 ರಿಂದ ಬೆಳಗ್ಗೆ 6 ರವರೆಗೆ ಬಂಡೀಪುರ ಅಭಯಾರಣ್ಯ ಪ್ರದೇಶದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದು ಅದು ಈಗಲೂ ಮುಂದುವರೆದಿದೆ. ಈ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿ ಹಿಡಿದಿದೆ ಎಂದರು.
Laxmi News 24×7