Breaking News

ಪಂಬನ್ ಸೇತುವೆ- ಭಾರತದ ಮೊದಲ ಲಂಬ ಲಿಫ್ಟ್ ರೈಲ್ವೆ ಸಮುದ್ರ ಸೇತುವೆ

Spread the love

ಹುಬ್ಬಳ್ಳಿ: ತಮಿಳುನಾಡಿನ ರಾಮೇಶ್ವರಂನಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಪಂಬನ್ ಸಮುದ್ರ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಇದರೊಂದಿಗೆ, ಹುಬ್ಬಳ್ಳಿ ಹಾಗೂ ರಾಮೇಶ್ವರಂ ನಡುವೆ ರೈಲು ಸಂಚಾರ ಆರಂಭಗೊಳ್ಳಲಿದೆ.

ಸೇತುವೆಯು ಭೂಮಿ ಮತ್ತು ರಾಮೇಶ್ವರಂ ದ್ವೀಪದ ನಡುವೆ ರೈಲು ಸಂಪರ್ಕ ಒದಗಿಸುತ್ತದೆ. ರಾಮನವಮಿಯ ಶುಭ ಸಂದರ್ಭದಲ್ಲಿ ಸೇತುವೆ ಉದ್ಘಾಟನೆಯಾಗಿದ್ದು, ಇದು ಭಾರತದ ಮೊದಲ ಲಂಬ ಲಿಫ್ಟ್ ರೈಲ್ವೆ ಸಮುದ್ರ ಸೇತುವೆಯಾಗಿದೆ.

ಈ ಮೊದಲು ಕಾರ್ಯಾಚರಣೆಯ ಕಾರಣಾಂತರಗಳಿಂದ ರದ್ದುಗೊಳಿಸಲಾಗಿದ್ದ ಹುಬ್ಬಳ್ಳಿ-ರಾಮೇಶ್ವರಂ ನಡುವಿನ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್ ರೈಲಿನ ಸೇವೆಯನ್ನು ಪುನರಾರಂಭಿಸಲಾಗಿದೆ.

1. ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್ ರೈಲನ್ನು ಏಪ್ರಿಲ್ 12ರಿಂದ ಜೂನ್ 28ರವರೆಗೆ ಪುನರಾರಂಭಿಸಲಾಗುತ್ತದೆ.

2. ರೈಲು ಸಂಖ್ಯೆ 07356 ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್ ರೈಲನ್ನು ಏಪ್ರಿಲ್ 13, 2025ರಿಂದ ಜೂನ್ 29ರವರೆಗೆ ಪುನರಾರಂಭಿಸಲಾಗುತ್ತದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ