ದ್ವಿತೀಯ ಪಿಯುಸಿಯಲ್ಲಿ ಪ್ರೇರಣಾ ಕಾಲೇಜಿನ ಖುಷಿ ಹುಗ್ಗಿ ಸಾಧನೆ
ಬೆಳಗಾವಿ ಪ್ರೇರಣಾ ಪಿ.ಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಹುಗ್ಗಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಭಾರಿ ಸಾಧನೆಯನ್ನು ಮಾಡಿದ್ದಾರೆ.
ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ.
ಬೆಳಗಾವಿಯ ಪ್ರೇರಣಾ ಪಿ. ಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಗಿರೀಶ ಹುಗ್ಗಿ ಒಟ್ಟು 600 ಅಂಕಗಳ ಪೈಕಿ 581 ಅಂಕಗಳನ್ನು ಪಡೆದಿದ್ದಾರೆ.
ಮಹಾವಿದ್ಯಾಲಯದಲ್ಲಿ ಮತ್ತು ಪೋಷಕರಲ್ಲಿ ಸಂತಸ ಮನೆ ಮಾಡಿದೆ. ಖುಷಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
Laxmi News 24×7