Breaking News
Home / ರಾಜ್ಯ / ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಖಂಡಿಸಿರುವ ಸಚಿವ ನಿತಿನ್ ಗಡ್ಕರಿ

ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಖಂಡಿಸಿರುವ ಸಚಿವ ನಿತಿನ್ ಗಡ್ಕರಿ

Spread the love

ನವದೆಹಲಿ,ಡಿ.- ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಖಂಡಿಸಿರುವ ಸಚಿವ ನಿತಿನ್ ಗಡ್ಕರಿ, ಕೇಂದ್ರವು ಅವರ ಅಭಿವೃದ್ದಿಗಾಗಿ ಕಾಯ್ದೆಗಳನ್ನು ತರಲು ಮುಂದಾಗಿದೆ. ಆದರೆ ಪ್ರತಿಪಕ್ಷಗಳು ರೈತರನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿವೆ ಎಂದು ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ತಂದಿರುವ ಮೂರು ಹೊಸ ಕಾನೂನುಗಳು ರೈತರ ಹಿತಾಸಕ್ತಿಗಾಗಿಯೇ ಆದರೆ ವಿಪಕ್ಷಗಳು ಈ ಬಗ್ಗೆ ಗೊಂದಲಗಳನ್ನು ಹರಡಿ ರೈತರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರೈತರು ಏನು ಗಳಿಸುತ್ತಿದ್ದಾರೆ ಮತ್ತು ಅವರು ಏನು ಕಳೆದುಕೊಳ್ಳುತ್ತಾರೆ ಎಂದು ಚರ್ಚಿಸಲು ರಾಜಕೀಯ ಪಕ್ಷಗಳು ಮತ್ತು ಅವರ ಮುಖಂಡರಿಗೆ ಮನವಿ ಮಾಡಲು ನಾನು ಬಯಸುತ್ತೇನೆ ಎಂದು ಗಡ್ಕರಿ ಹೇಳಿದರು. 20-25 ವರ್ಷಗಳಿಂದ ರೈತರಿಗಾಗಿ ಕೆಲಸ ಮಾಡುತ್ತಿದ್ದೇನೆ. ನನಗೆ ಅವರ ಪರಿಸ್ಥಿತಿಯ ಅರವಿದೆ. ಹೊಸ ಕಾನೂನುಗಳ ಕುರಿತು ರೈತರಲ್ಲಿ ಅರಿವು ಮೂಡಿಸಲು ಕೇಂದ್ರವು ಮುಕ್ತ ಮನಸ್ಸಿನಿಂದ ಸಿದ್ದವಿದೆ ಎಂದು ಹೇಳಿದರು.

ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, 2020, ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ 2020 ಮತ್ತು ಅಗತ್ಯ ಸರಕುಗಳು (ತಿದ್ದುಪಡಿ) ಕಾಯ್ದೆ 2020ನ್ನು ರೈತರಿಗಾಗುವ ನಷ್ಟ ಮತ್ತು ವಂಚನೆಯನ್ನು ತಡೆಗಟ್ಟಲು ತರಲಾಗಿದೆ ಎಂದು ತಿಳಿಸಿದರು.

ಕೃಷಿ ಮಾರುಕಟ್ಟೆಯನ್ನು ವಶಪಡಿಸಿಕೊಂಡು ಕಾಪೆರ್ರೇಟ್ ವಲಯಕ್ಕೆ ಸಹಾಯ ಮಾಡುವ ದುರದ್ದೇಶವಿದೆ ಎಂದು ಕೆಲವು ರೈತ ಸಂಘಗಳು ಮತ್ತು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಈ ಧೋರಣೆ ಕೈಬಿಡಬೇಕು. ಈ ಕಾನೂನುಗಳು ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಮತ್ತು ಮಧ್ಯವರ್ತಿಗಳಿಂದ ಮುಕ್ತಗೊಳಿಸಲು ಹೆಚ್ಚಿನ ಆಯ್ಕೆ ನೀಡುತ್ತದೆ ಎಂದು


Spread the love

About Laxminews 24x7

Check Also

‘ಲೋಕಾ’ ದಾಳಿಯಲ್ಲಿ ಪತ್ತೆಯಾಯ್ತು ಅಧಿಕಾರಿಯ ಆಕ್ರಮ ಸಂಪತ್ತು;17 ಸೈಟ್, 27 ಎಕರೆ ಕೃಷಿ ಭೂಮಿ:

Spread the love ಕೊಪ್ಪಳ: ಕೊಪ್ಪಳದ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪ ಅವರಿಗೆ ಸೇರಿದ ಮನೆ ಮತ್ತು ಕಚೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ