Breaking News

ದಾಂಡೇಲಿ ಮನೆಯಲ್ಲಿತ್ತು 14 ಕೋಟಿ ರೂ. ನಕಲಿ ನೋಟು

Spread the love

ಕಾರವಾರ, ಏಪ್ರಿಲ್ 9: ಬಾಗಿಲು ತೆರೆದಿದ್ದ ಮನೆ, ಒಳಗೆ ಹಣ್ಣು – ತರಕಾರಿ ರೀತಿಯಲ್ಲಿ ಬಿದ್ದಿರುವ ಕಂತೆ ಕಂತೆ (Fake Currency Notes) ನೋಟುಗಳು. ವಿಷಯ ತಿಳಿದು ಮನೆಯಿಂದ ಹೊರ ಬಾರದ ಜನರು.

ಇಂಥದ್ದೊಂದು ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ (Dandeli) ನಗರದ ಗಾಂಧಿನಗರ ಬಡಾವಣೆ. ಗಾಂಧಿನಗರದ ನೂರಜಾನ್ ಜುಂಜುವಾಡ್ಕರ ಎಂಬವವರ ಮನೆಯೊಂದರಲ್ಲಿ ಗೋವಾ (Goa) ಮೂಲದ ಅರ್ಷದ್ ಖಾನ್ ಎಂಬಾತ  ಬಾಡಿಗೆದಾರನಾಗಿ ವಾಸ್ತವ್ಯವಿದ್ದ.

ಕಳೆದ ಒಂದು ತಿಂಗಳಿನಿಂದ ಈತ ಆ ಮನೆಯಲ್ಲಿ ಇಲ್ಲದೇ ಇರುವುದನ್ನು ಗಮನಿಸಿ ಮತ್ತು ಆ ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು, ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ದಾಂಡೇಲಿ ನಗರ ಠಾಣೆಯ ಪೊಲೀಸರು ಮನೆಗೆ ಬಂದು ಬಾಗಿಲು ತೆರೆಯುತ್ತಿದ್ದಂತೆಯೇ, 500 ರೂ. ಮುಖ ಬೆಲೆಯ ಕಂತೆ ಕಂತೆ ನೋಟುಗಳು ಕಾಣಿವೆ.

ಒಮ್ಮೆಲೇ ದಂಗಾದ ಪೊಲೀಸರು ಸ್ಥಳಕ್ಕೆ ಹಿರಿಯ ಪೊಲೀಸರನ್ನು ಕರೆಸಿದ್ದಾರೆ. ಕೂಡಲೇ ಮನೆ ಮಾಲೀಕರುವ ಬಾಡಿಗೆ ಮನೆಯಲ್ಲಿ ವಾಸವಿದ್ದ ವ್ಯಕ್ತಿಗೆ ಕರೆ ಮಾಡಿದ್ದಾರೆ. ಆತ ಬೇರೆ ಕಡೆ ಇದ್ದಿದ್ದರಿಂದ ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗಿನ ಜಾವದ ವರೆಗೆ ನೋಟನ್ನು ತಮ್ಮ ಸುಪರ್ದಿಯಲ್ಲಿ ಇಟ್ಟಕೊಂಡಿದ್ದಾರೆ.


Spread the love

About Laxminews 24x7

Check Also

ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

Spread the loveಶಕ್ತಿ ಯೋಜನೆಗೆ 5,300 ಕೋಟಿ ರೂ. ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ