ಏಪ್ರಿಲ್ 11ರಂದು ಬೆಳಗಾವಿ ರಾಣಿ ಚೆನ್ನಮ್ಮ ವಿವಿ 13ನೇ ಘಟಿಕೋತ್ಸವ-ಕುಲಪತಿ ಡಾ.ಸಿ ಎಂ. ತ್ಯಾಗರಾಜ್
ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಏಪ್ರಿಲ್ 11ರಂದು ವಿಟಿಯು ಎಪಿಜೆ ಅಬ್ದುಲ್ ಕಲಾಂ ಸಭಾ ಭವನದಲ್ಲಿ ಜರುಗಲಿದೆ ಎಂದು ಕುಲಪತಿ ಡಾ ಸಿ.ಎಂ ತ್ಯಾಗರಾಜ್ ತಿಳಿಸಿದರು
ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ದಲ್ಲಿ ಗೌರವಾನ್ವಿತ ರಾಜ್ಯಪಾಲರು ಹಾಗೂ ಕುಲಾಧಿಪತಿಗಳಾದ ಮಾನ್ಯ ಥಾವರಚೆಂದ ಗೆಹಲೋತ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಮುಖ್ಯ ಅತಿಥಿಗಳಾಗಿರುವರು. ಮುಂಜಾನೆ 11:00 ಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಸಲಾಗುತ್ತಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಹದಿನೈದು ವಸಂತಗಳನ್ನು ಪೂರೈಸಿದೆ. ರಾಜ್ಯದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲೂ ಮತ್ತು ಗಾತ್ರದಲ್ಲೂ ಸಹ ದೊಡ್ಡದಾಗಿದೆ. ವಿಶ್ವವಿದ್ಯಾಲಯವು 2021 ರಲ್ಲಿ ನ್ಯಾಕ್‌ನಿಂದ B’ ಮನ್ನಣೆಗೊಂಡು ಉನ್ನತ ಶ್ರೇಣಿಯನ್ನು ಪಡೆದುಕೊಂಡಿದೆ. ಇ-ಆಡಳಿತ ವ್ಯವಸ್ಥೆ ಜಾರಿಯಲ್ಲಿ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ.ಸಾಹಿತ್ಯ ವಿಮರ್ಶಕರು ಇವರು ಘಟಿಕೋತ್ಸವ ಭಾಷಣವನ್ನು ಮಾಡುವರು.
ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ 03 ಗಣ್ಯಮಾನ್ಯರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗುತ್ತಿದೆ. ಅವರುಗಳೆಂದರೆ, ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠ, ನಿಡಸೋಶಿಯ ಪೀಠಾಧಿಪತಿಗಳಾದ ಪೂಜ್ಯ ಶ್ರೀಮನ್ ನಿರಂಜನ ಜಗದ್ಗುರು ಪಂಚಮ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮೀಜಿ, ಇವರಿಗೆ ಕೃಷಿ, ಶಿಕ್ಷಣ ಮತ್ತು ಸಮಾಜಸೇವೆಗೆ ಡಾಕ್ಟರ್ ಆಫ್ ಲೆಟರ್ಸ್ ಗೌರವ; ಕಾನೂನು ಕ್ಷೇತ್ರದಲ್ಲಿ ಹೆಸರುವಾಸಿಯಾದ ಸಂವಿಧಾನ ಜಾಗೃತಿಯಲ್ಲಿ ಕಾರ್ಯತತ್ಪರರಾದ ಮುಖ್ಯ ನ್ಯಾಯಮೂರ್ತಿ ಎಚ್. ಎನ್. ನಾಗಮೋಹನದಾಸ್, ಗೌರವಾನ್ವಿತ ನ್ಯಾಯಮೂರ್ತಿಗಳು, ಉಚ್ಚ ನ್ಯಾಯಾಲಯ, ಕರ್ನಾಟಕ ಇವರಿಗೆ ಡಾಕ್ಟರ್ ಆಫ್ ಲಾ ಗೌರವ; ಹಾಗೂ ಶ್ರೀ ಶಮಸುದ್ದೀನ್ ಅಬ್ದುಲ್ಲಾ ಪುಣೇಕರ್,
ಸಂಸ್ಥಾಪಕರು ಹಾಗೂ ಅಧ್ಯಕ್ಷರು, ಸೀಕ್ಯಾಬ್ (SECAB), ವಿಜಯಪುರ ಇವರಿಗೆ ಶಿಕ್ಷಣ, ಸಹಕಾರ ಮತ್ತು ಸಾಮಾಜಿಕ ಸೇವೆಗಾಗಿ ಡಾಕ್ಟರ್ ಆಫ್ ಸೈನ್ಸ್ ಗೌರವ ಸಲ್ಲಿಸಲಾಗುತ್ತಿದೆ. ಸದರಿ ಘಟಿಕೋತ್ಸವದಲ್ಲಿ ಒಟ್ಟು 46013 ವಿದ್ಯಾರ್ಥಿಗಳು ಸ್ನಾತಕ ಪದವಿಯನ್ನು ಹಾಗೂ 2866 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪಡೆದುಕೊಳ್ಳಲು ಅರ್ಹರಾಗಿದ್ದಾರೆ. ಇದರಲ್ಲಿ 11 ಸುವರ್ಣ ಪದಕಗಳನ್ನು ಹಾಗೂ ಒಂದು ನಗದು ಬಹುಮಾನವನ್ನು ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನೀಡಲಾಗುವುದು. 20 ಪಿಎಚ್.ಡಿ ಪದವಿಗಳನ್ನು ಪ್ರದಾನ ಮಾಡಲಾಗುವುದು ಎಂದು ಹೇಳಿದರು
ಈ ಸಂದರ್ಭದಲ್ಲಿ ಪ್ರಾಧ್ಯಾಪಕರು ಸಿಬ್ಬಂದಿ ಉಪಸ್ಥಿತರಿದ್ದರು
Laxmi News 24×7