Breaking News

ಹುಬ್ಬಳ್ಳಿ, ಬೆಳಗಾವಿ: ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಲು ಕೇಂದ್ರಕ್ಕೆ ಪತ್ರ*

Spread the love

ಹುಬ್ಬಳ್ಳಿ, ಬೆಳಗಾವಿ: ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಲು ಕೇಂದ್ರಕ್ಕೆ ಪತ್ರ*
*ವಿಮಾನಯಾನ ಸಂಸ್ಥೆಗಳ ಜತೆ ಸುದೀರ್ಘ ಸಭೆ ನಡೆಸಿದ ಸಚಿವ ಎಂ.ಬಿ.ಪಾಟೀಲ, ಪ್ರಿಯಾಂಕ್ ಖರ್ಗೆ*
*ಕಲ್ಬುರ್ಗಿ ಸೇರಿ ರಾಜ್ಯದ 6 ನಗರ ವಿಮಾನ ಸೇವೆ ಬಲವರ್ಧನೆ: ಎಂ ಬಿ ಪಾಟೀಲ*
ಬೆಂಗಳೂರು: ಕಲ್ಬುರ್ಗಿ ಸೇರಿದಂತೆ ರಾಜ್ಯದ ಎರಡನೇ ಹಂತದ ಆರು ನಗರಗಳಿಗೆ ವಿಮಾನಯಾನ ಸೇವೆಯನ್ನು ಮತ್ತಷ್ಟು ಬಲಪಡಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಮಂಗಳವಾರ ವಿವಿಧ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿದರು.
ಮಂಗಳವಾರ ಅವರು ಖನಿಜ ಭವನದಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಜತೆಗೂಡಿ ಹಲವು ವಿಮಾನಯಾನ ಸಂಸ್ಥೆಗಳ ಉನ್ನತಾಧಿಕಾರಿಗಳ ಜೊತೆ ದೀರ್ಘ ಸಭೆ ನಡೆಸಿ, ಚರ್ಚಿಸಿದರು.
ಕಲ್ಬುರ್ಗಿ, ಮೈಸೂರು, ಬೀದರ್, ಹುಬ್ಬಳ್ಳಿ, ಬೆಳಗಾವಿ, ವಿದ್ಯಾನಗರ (ಜಿಂದಾಲ್ ಟೌನ್ ಶಿಪ್) ಮತ್ತು ಉದ್ಘಾಟನೆಗೆ ಸಿದ್ಧವಾಗಿರುವ ವಿಜಯಪುರ ವಿಮಾನ ನಿಲ್ದಾಣಗಳಿಂದ ರಾಜ್ಯ ಸೇರಿದಂತೆ ಇತರ ರಾಜ್ಯಗಳಿಗೆ ವಿಮಾನಯಾನ‌ ಸಂಪರ್ಕ ಹೆಚ್ವಿಸುವ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಇಂಡಿಗೋ, ಸ್ಟಾರ್ ಏರ್, ಏರ್ ಇಂಡಿಯಾ, ಆಕಾಶ್, ಅಲೈಯನ್ಸ್ ಏರ್ ವೇಸ್, ಸ್ಪೈಸ್ ಜೆಟ್ ಸೇರಿದಂತೆ ಎಲ್ಲ ಪ್ರಮುಖ ವಿಮಾನ ಯಾನ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ವಿಮಾನ ಸಂಚಾರಕ್ಕೆ ಕಲ್ಬುರ್ಗಿ ಹೆಚ್ಚು ಲಾಭದಾಯಕ ಮಾರ್ಗವಾಗಿದ್ದರೂ ಅಲ್ಲಿಗೆ ಬೆಂಗಳೂರಿನಿಂದ ವಾರಕ್ಕೆ ಕೇವಲ ಮೂರು ದಿನ ಮಾತ್ರ ವಿಮಾನ ಸಂಚಾರ ಇದೆ. ಇದನ್ನು‌‌ ಮತ್ತಷ್ಟು ಹೆಚ್ಚಿಸಬೇಕು.
ಕೇವಲ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ‌ ನಗರ ಹಾಗೂ ಅನ್ಯ ರಾಜ್ಯಗಳ ಪ್ರಮುಖ ನಗರಗಳಿಗೂ ಸಂಪರ್ಕ ಕಲ್ಪಿಸಬೇಕು ಎನ್ನುವ ಬೇಡಿಕೆಯನ್ನು ಇಬ್ಬರೂ ಸಚಿವರು ಸಭೆಯಲ್ಲಿ ಮಂಡಿಸಿದರು. ಇದಕ್ಕೆ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳು ಸಕಾರಾತ್ಮಕ ವಾಗಿ ಸ್ಪಂದಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ