Breaking News

ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ

Spread the love

 

ಬೆಂಗಳೂರು (ಡಿ. 13): ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದ ಕೆಎಸ್​ಆರ್​ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ನೌಕರರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಇಂದು ಸಹ ರಸ್ತೆಗೆ ಇಳಿಯದ ಬಿಎಂಟಿಸಿ, ಕೆಎಸ್ಆರ್​ಟಿಸಿ ಬಸ್​ಗಳಿಂದ ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ಪರದಾಡುವಂತಾಗಿದೆ. ಇಂದು ಸಾರಿಗೆ ನೌಕರರ ಜೊತೆಗೆ ಮಾತುಕತೆಗೆ ಮುಂದಾಗುತ್ತಾರಾ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಎಂಬುದನ್ನು ಕಾದು ನೋಡಬೇಕಾಗಿದೆ.ಕಳೆದ ಮೂರು ದಿನಗಳಿಂದ ಬಸ್​ಗಳಿಲ್ಲದೆ ಬೆಂಗಳೂರಿನ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣ ಬಣಗುಡುತ್ತಿದೆ. ಬಸ್ ಬಾರದಿದ್ದರೂ ನಿಲ್ದಾಣದತ್ತ ಬರುತ್ತಿರುವ ಪ್ರಯಾಣಿಕರು ಬಸ್​ಗಾಗಿ ಕಾಯುತ್ತಿದ್ದಾರೆ. ಇನ್ನೊಂದೆಡೆ ಬಸ್ ನಿಲ್ದಾಣದ ಮೇಲ್ಭಾಗದಲ್ಲಿ ಖಾಸಗಿ ಬಸ್​ಗಳು ಕಾರ್ಯಾಚರಣೆ ನಡೆಸಿವೆ. ಹಾಸನ, ತುಮಕೂರು, ಶಿವಮೊಗ್ಗ, ದಾವಣಗೆರೆ ಸೇರಿ ಹಲವೆಡೆಗೆ ಖಾಸಗಿ ಬಸ್​ಗಳು ಸಂಚಾರ ಮಾಡುತ್ತಿವೆ.


Spread the love

About Laxminews 24x7

Check Also

ಮೆಟ್ರೋ ದರ ನಿಗದಿ ಸಮಿತಿ ಸಲ್ಲಿಸಿದ ವರದಿ ಬಹಿರಂಗಪಡಿಸಲು ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Spread the loveಬೆಂಗಳೂರು: ಬೆಂಗಳೂರು ಮೆಟ್ರೋ ರೈಲಿನ ಟಿಕೆಟ್ ದರ ಹೆಚ್ಚಳ ಸಂಬಂಧ ನಿವೃತ್ತ ನ್ಯಾಯಮೂರ್ತಿ ತರಿಣಿ ನೇತೃತ್ವದ ದರ ನಿಗದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ