Breaking News

ಚಾಲಕನ ನಿಯಂತ್ರಣ ಕಳೆದುಕೊಂಡು ಮನೆ ಮೇಲೆ ಬಿದ್ದ ಸರ್ಕಾರಿ ಬಸ್

Spread the love

ಚಿಕ್ಕಮಗಳೂರು: ಕೆಎಸ್ ಆರ್ ಟಿಸಿ ಬಸ್ ರಸ್ತೆ ಬದಿಯ ಕಂದಕಕ್ಕೆ ನುಗ್ಗಿ, ಕಂದಕದಲ್ಲಿದ್ದ ಮನೆಯ ಮೇಲ್ಛಾವಣಿ ಮೇಲೆ ಬಿದ್ದ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗದಲ್ಲಿ ಇಂದು ನಡೆಯಿತು.

ಘಟನೆಯಲ್ಲಿ ಚಾಲಕ ಹಾಗೂ ಕೆಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದ ಸಾಕಷ್ಟು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

40 ಮಂದಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ತುಂತುರು ಮಳೆಯ ನಡುವೆ ಬಸ್, ಚಾಲಕನ ನಿಯಂತ್ರಣ ತಪ್ಪಿದ್ದು, ಚಿಕ್ಕಮಗಳೂರಿನಿಂದ ಶೃಂಗೇರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.

ಜಲದುರ್ಗ ಸಮೀಪ ಹಾಗೂ ಜಯಪುರ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ರವಾನಿಸಲಾಗಿದೆ.

ಜಯಪುರ ಪೊಲೀಸರು ಹಾಗೂ ಶಾಸಕ ಟಿ.ಡಿ.ರಾಜೇಗೌಡ ಸ್ಥಳಕ್ಕೆ ಬೇಟಿ ಪರಿಶೀಲನೆ ನಡೆಸಿದರು. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ