Breaking News

ಚೆಕ್ ಬೌನ್ಸ್ ಮತ್ತು ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಡಬಲ್ ಶಾಕ್

Spread the love

ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಎಸಿಜೆಂಎಂ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿ ದಂಡ ವಿಧಿಸಿದೆ. ಮತ್ತೊಂದೆಡೆ, ವಾಲ್ಮೀಕಿ ನಿಗಮದಲ್ಲಿನ ಅವ್ಯವಹಾರ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.

ಹಿಂದುಳಿದ ವರ್ಗಗಳ ಇಲಾಖೆ ಮಾಜಿ ಸಚಿವರಾಗಿದ್ದ ನಾಗೇಂದ್ರ, ಅನಿಲ್ ರಾಜಶೇಖರ್ ಮತ್ತು ಚುಂಡೂರು ಭಾಸ್ಕರ್ ಈ ಮೂವರು ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ದೋಷಿ ಎಂದು 42ನೇ ಎಸಿಜೆಂಎಂ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ತೀರ್ಪು ನೀಡಿದ್ದಾರೆ. ಈ ಸಂಬಂಧ 1.23 ಕೋಟಿ ರೂ ದಂಡ ವಿಧಿಸಿದ್ದಾರೆ. ಒಂದು ವೇಳೆ ದಂಡ ಕಟ್ಟದಿದ್ದರೆ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ವಿಎಸ್ಎಲ್ ಸ್ಟೀಲ್ ಕಂಪೆನಿ ಹಾಗೂ ನಾಗೇಂದ್ರ, ಅನಿಲ್ ಹಾಗೂ ಭಾಸ್ಕರ್ ಪಾಲುದಾರಿಕೆಯ ಬಿ.ಸಿ.ಇನ್ಫ್ರಾಸ್ಟ್ರಕ್ಚರ್ ಆ್ಯಂಡ್ ರಿಸೋರ್ಸ್ ಕಂಪನಿ ನಡುವೆ 2013ರಿಂದ ವಿವಾದ ಭುಗಿಲೆದ್ದಿತ್ತು. ಆಗ ದೂರುದಾರ ಕಂಪೆನಿ ಪರವಾಗಿ ನ್ಯಾಯಾಲಯ ತೀರ್ಪು ಬಂದಿತ್ತು. ಇದರಂತೆ 2.53 ಕೋಟಿ ರೂಪಾಯಿ ಪಾವತಿಸುವಂತೆ ತಾಕೀತು ಮಾಡಿತ್ತು. ಈ ಸಂಬಂಧ ನಾಗೇಂದ್ರ ಪಾಲುದಾರಿಯ ಕಂಪೆನಿಯು 2022ರಲ್ಲಿ ನೀಡಿದ್ದ 1 ಕೋಟಿ ರೂಪಾಯಿ ಚೆಕ್ ಬೌನ್ಸ್ ಆಗಿತ್ತು. ನ್ಯಾಯಾಲಯದಲ್ಲಿ ದಾವೆ ಹೂಡಿತ್ತು. ವಿಚಾರಣೆಯಲ್ಲಿ ಸಾಕ್ಷ್ಯಾಧಾರಗಳು ಆರೋಪಿತರ ವಿರುದ್ಧ ಸಾಬೀತಾಗಿದ್ದರಿಂದ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ